ಬೆಳಗಾವಿಯ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯೋಜನೆಯ ಹಣದಿಂದ ತಮ್ಮ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಿಸಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಮಂಟೂರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಅವರ ಕಾರ್ಯಕಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
High-Tech Library: ಸುಣ್ಣ ಬಣ್ಣ ಇಲ್ದೆ ಹಾಳು ಕೊಂಪೆಯಾಗಿದ್ದ ಜಾಗಕ್ಕೆ ಹೊಸ ರೂಪವನ್ನ ಇಲ್ಲಿನ ಗ್ರಾ.ಪಂ ಸದಸ್ಯರು & ಪಿಡಿಓ ನೀಡಿದ್ದಾರೆ. ಗ್ರಾಮದಲ್ಲಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಗ್ರಂಥಾಲಯದಲ್ಲಿ ಗ್ರಂಥ ಬಂಡಾರವೇ ಇದೆ. ಈ ಲೈಬ್ರರಿಯಲ್ಲಿ ಸಾರ್ವಜನಿಕರಿಗೆ & ಮಕ್ಕಳಿಗಾಗಿ ವಿಶೇಷ ವಿಭಾಗ ತಗೆಯಲಾಗಿದೆ. ಇನ್ನು ಮಕ್ಕಳು ಕೇರಂ ಚೆಸ್ ಸೇರಿದಂತೆ ವಿವಿಧ ಆಟಗಳನ್ನ ಕಲಿಯಲು ಮತ್ತು ಓದಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕ ಗ್ರಂಥಾಲಯ ವತಿಯಿಂದ 2021ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2022 ರ ಜನವರಿ 31 ರೊಳಗೆ ಕಾಪಿರೈಟ್ ಮಾಡಿಸಿ, ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಸಲ್ಲಿಸಲು ಆಹ್ವಾನಿಸಲಾಗಿದೆ.
ಕೊರೊನಾ ವೈರಸ್ ಮಹಾಮಾರಿಯ ಹಿನ್ನೆಲೆ ಇಡೀ ವಿಶ್ವಾದ್ಯಂತ ಸ್ಕೂಲ್-ಕಾಲೇಜುಗಳು ಬಂದ್ ಆಗಿವೆ. ಇನ್ನೊಂದೆಡೆ ಕೊವಿಡ್-19 ಸೋಂಕಿತರ ಸಂಖ್ಯೆಯಲ್ಲಿಯೂ ಕೂಡ ನಿರಂತರ ಏರಿಕೆಯಾಗುತ್ತಿರುವ ಕಾರಣ ಶಾಲಾ-ಕಾಲೇಜುಗಳು ತೆರೆದುಕೊಳ್ಳುವ ಲಕ್ಷಣಗಳೂ ಕೂಡ ಇನ್ನೂ ಕಂಡುಬರುತ್ತಿಲ್ಲ.
ದರ್ಗನಹಳ್ಳಿ ಗ್ರಾಮದಲ್ಲಿ ಎತ್ತಿನ ಬಂಡಿಯಲ್ಲಿ ಚಲಿಸುವ ಗ್ರಂಥಾಲಯದಿಂದಾಗಿ ಹಳ್ಳಿಯ ಮಕ್ಕಳು ಈಗ ಮನೆಯಲ್ಲಿ ಕುಳಿತು ಪುಸ್ತಕಗಳನ್ನು ಉಚಿತವಾಗಿ ಓದುತ್ತಿದ್ದಾರೆ. ಕಳೆದ ಆರು ತಿಂಗಳಿನಿಂದ ಕಾಶಿನಾಥ್ ಕೋಲಿ ಎಂಬ ಯುವಕ ಸೋಲಾಪುರದ ದರ್ಗನಹಳ್ಳಿ ಗ್ರಾಮದಲ್ಲಿ ಎತ್ತಿನ ಗಾಡಿಯಲ್ಲಿ ಗ್ರಂಥಾಲಯವನ್ನು ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.