ಭಾರತೀಯ ಚುನಾವಣೆಗಳ ನ್ಯಾಯೋಚಿತ ಮತ್ತು ಸಮಗ್ರತೆಯ ಬಗ್ಗೆ ವಿಶ್ವಾಸ ಹೊಂದಿದೆಯೆಂದು ಬುಧುವಾರ ಅಮೇರಿಕಾ ಹೇಳಿದೆ. ಚುನಾವಣೆಯಲ್ಲಿ ಯಾರೇ ಗೆಲುವು ಸಾಧಿಸಿದರೂ ಅವರೊಂದಿಗೆ ಕಾರ್ಯನಿರ್ವಹಿಸುವುದಾಗಿ ಅಮೇರಿಕಾ ಹೇಳಿದೆ.
ಈ ಬಾರಿ ಲೋಕಸಭಾ ಚುನಾವಣೆಯ ಫಲಿತಾಂಶಗಳು (ಲೋಕಸಭಾ ಚುನಾವಣಾ ಫಲಿತಾಂಶಗಳು 2019) ಈ ಮುಖಂಡರ ಮಕ್ಕಳು ನಿಜಕ್ಕೂ ಪಕ್ಷದ 'ಯಂಗ್ ಟರ್ಕ್' ಆಗಲಿದ್ದಾರೆಯೇ ಅಥವಾ ಇಲ್ಲವೋ ಎಂದು ನಿರ್ಧರಿಸುತ್ತದೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 VVPAT ಯಂತ್ರಗಳನ್ನು ಅಳವಡಿಸಲಾಗಿದೆ. ಒಂದು ಮಿಷನ್ ನಲ್ಲಿ ಸುಮಾರು 1400 ಸ್ಲಿಪ್ ಗಳಿವೆ. ಒಂದು VVPAT ಯಂತ್ರದ ಎಣಿಕೆಗೆ ಸುಮಾರು 1 ಗಂಟೆ ತೆಗೆದುಕೊಳ್ಳುತ್ತದೆ.
ಇದೇ ಮೊದಲ ಬಾರಿಗೆ ಲೋಕಸಭಾ ಕ್ಷೇತ್ರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 5 ಇವಿಎಂಗಳ ಮತಗಳನ್ನು ವಿವಿಪ್ಯಾಟ್ ನೊಂದಿಗೆ ತಾಳೆ ನೋಡಲಿದ್ದು, ಫಲಿತಾಂಶ 4 ಗಂಟೆ ತಡವಾಗಲಿದೆ ಎಂದು ಆಯೋಗ ತಿಳಿಸಿದೆ.
ಇಂದು ಎಲ್ಲರ ಚಿತ್ತ ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಇರಲಿದೆ. ಒಂದೂವರೆ ತಿಂಗಳಗಳ ಕಾಲ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆ ಮೇ 19 ರಂದು ಅಂತಿಮಗೊಂಡಿತ್ತು. ಈಗ ಮೇ 23 ರಂದು ಅಂತಿಮ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.
ಬಾಂಬೆ ಶೇರು ಮಾರುಕಟ್ಟೆ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ 140 ಪಾಯಿಂಟ್ ಗಳ ಏರಿಕೆಯನ್ನು ಕಂಡಿದೆ.ಬ್ಯಾಂಕಿಂಗ್ ಹಾಗೂ ಆಟೋದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೇರು ಹರಿದು ಬಂದಿದೆ ಎಂದು ತಿಳಿದುಬಂದಿದೆ.
ನಾಳೆ ದಿನ ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಇದಕ್ಕೂ ಮುನ್ನ ಗೃಹ ಸಚಿವಾಲಯ ದೇಶದೆಲ್ಲೆಡೆ ಹಿಂಸಾಚಾರದ ಘಟನೆಗಳು ನಡೆಯುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದೆ.
ಕಾಂಗ್ರೆಸ್ ಸೇರಿ ಎಲ್ಲ ಪ್ರತಿಪಕ್ಷಗಳು ಇವಿಎಂ ಬಗ್ಗೆ ಎತ್ತಿರುವ ಅನುಮಾನದ ಪ್ರಶ್ನೆಗಳ ವಿಚಾರವಾಗಿ ಈಗ ಸಿದ್ದರಾಮಯ್ಯ ಈ ಹಿಂದೆ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹರಾವ್ ಬರೆದ ಪುಸ್ತಕವನ್ನು ಉಲ್ಲೇಖಿಸಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಕೇಂದ್ರದಲ್ಲಿ ಮತ್ತೆ ಎನ್ ಡಿ ಎ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಭರವಸೆ ವ್ಯಕ್ತಪಡಿಸಿದ್ದಾರೆ.ತಮ್ಮ ಮಗ ಕೇಂದ್ರದ ಸಚಿವ ಸಂಪುಟದಲ್ಲಿ ಸೇರಲಿದ್ದಾರೆ ಎನ್ನುವ ಮುನ್ಸೂಚನೆಯನ್ನು ಲೋಕಸಭಾ ಅಂತಿಮ ಫಲಿತಾಂಶಕ್ಕೆ ಮುನ್ನ ನೀಡಿದ್ದಾರೆ.
ಬಹುತೇಕ ಪಕ್ಷಗಳು ಎನ್.ಡಿ.ಎ ಸರ್ಕಾರಕ್ಕೆ ಬಹುಮತ ನೀಡಿರುವ ಹಿನ್ನಲೆಯಲ್ಲಿ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಚುನಾವಣೋತ್ತರ ಸಮೀಕ್ಷೆಗಳ ಕುರಿತಾಗಿ ಮೌನ ಮುರಿದು ಅವುಗಳನ್ನು ನಕಲಿ ಸಮೀಕ್ಷೆಗಳು ಎಂದು ಕರೆದಿದ್ದಾರೆ.
ಬಿಜೆಪಿಯೇತರ ಸರ್ಕಾರ ರಚನೆಗೆ ಪಣತೊಟ್ಟಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈಗ ಹಲವು ರಾಷ್ಟ್ರೀಯ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ ನಂತರ ಇಂದು ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಹೆಚ್ಡಿಕೆ ಅವರನ್ನು ಭೇಟಿ ಮಾಡಿ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣಾ ಮತ ಎಣಿಕೆಗೆ ಕೇವಲ ಎರಡೇ ದಿನಗಳು ಬಾಕಿ ಇದ್ದು, ಇದಕ್ಕೂ ಮುನ್ನ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎನ್ ಡಿ ಎ ಮಿತ್ರ ಪಕ್ಷಗಳಿಗೆ ವಿಶೇಷ ಭೋಜನಕ್ಕಾಗಿ ಆಹ್ವಾನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.