2024ರ ಜೂನ್ವರೆಗೂ ಜೆ.ಪಿ.ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಯಲಿದ್ದಾರೆ ಎಂದಿದ್ದಾರೆ.
ನವದೆಹಲಿಯಲ್ಲಿಂದು ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ.ಕರ್ನಾಟಕ ಸೇರಿದಂತೆ ಮಧ್ಯಪ್ರದೇಶ, ತೆಲಂಗಾಣ,ರಾಜಸ್ಥಾನ ಪ್ರಮುಖ ರಾಜ್ಯಗಳ ವಿಧಾನ ಸಭೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರದಂದು ಬಿಜೆಪಿಯೇತರ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ತಮ್ಮ ರಾಜಕೀಯ ಆಕಾಂಕ್ಷೆಯನ್ನು ಮತ್ತೊಮ್ಮೆ ಬಹಿರಂಗಪಡಿಸಿದ ಬಾಲಿವುಡ್ ನಟ ವಿವೇಕ್ ಒಬೆರಾಯ್ ಒಂದು ವೇಳೆ ರಾಜಕೀಯ ಸೇರಿದರೆ 2024ರಲ್ಲಿ ಗುಜರಾತಿನಿಂದ ಸ್ಪರ್ಧಿಸಲು ತಾವು ಚಿಂತನೆ ನಡೆಸಿರುವುದಾಗಿ ಹೇಳಿದರು.
2019 ರ ಲೋಕಸಭೆ ಚುನಾವಣೆಗೆ ಮೊದಲು ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆರಂಭವಾಗಲಿದೆ ಎಂದು ಬಿಜೆಪಿ ಮಾಜಿ ಸಂಸದ ಮತ್ತು ರಾಮ ಜನ್ಮಭೂಮಿ ನ್ಯಾಯಾಸ್ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ತಿಳಿಸಿದ್ದಾರೆ.
"ಕರ್ನಾಟಕದ ಚುನಾವಣೆಯ ನಂತರ ರಾಹುಲ್ ಗಾಂಧಿಯವರ ತುರ್ತು ನಿರ್ಧಾರಗಳು ಕೆಲವೊಮ್ಮೆ ಕಾಂಗ್ರೆಸ್ ನಲ್ಲಿ ಅಚ್ಚರಿಯನ್ನು ಉಂಟು ಮಾಡಿದ್ದವು. ಈ ಬಾರಿ ಇಡೀ ದೇಶದಲ್ಲೆಡೆ ಕಾಂಗ್ರೆಸ್ ಪಕ್ಷವು ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಸಹಿತ ಮಹಾಮೈತ್ರಿ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ."
By accepting cookies, you agree to the storing of cookies on your device to enhance site navigation, analyze site usage, and assist in our marketing efforts.