Eid 2023: ಈದ್ ಪ್ರಾರ್ಥನೆಗಾಗಿ ನೆರೆದಿದ್ದ ಜನಸಮೂಹವನ್ನುದ್ದೇಶಿಸಿ ಮಾತನಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೋಗೆಯಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ಯಾವುದೇ ಕಾರಣಕ್ಕೂ ದೇಶ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಮಮತಾ ಹೇಳಿದ್ದಾರೆ.
Mamata Defending PM Modi: ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಒಗ್ಗೂಡುವಿಕೆಯ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರ್.ಎಸ್.ಎಸ್ ಅನ್ನು ಬಣ್ಣಿಸಿ ನಂತರ ಪ್ರಧಾನಿ ಮೋದಿ ಸಮರ್ಥಿಸಿದ್ದು, ನಿತೀಶ್ ಹಾಗೂ ಕಾಂಗ್ರೆಸ್ ಗೆ ನೀಡುತ್ತಿರುವ ಸಂಕೇತವಾಗಿದೆಯೇ ಎಂಬ ಗುಸುಗುಸು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರಲಾರಂಭಿಸಿದೆ.
ಯುಪಿಎ ಅಸ್ತಿತ್ವದಲ್ಲಿಲ್ಲ ಎನ್ನುವ ಮಮತಾ ಬ್ಯಾನರ್ಜೀ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಕಾಂಗ್ರೆಸ್ ಇಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ವಿರೋಧ ಪಕ್ಷದ ಮೈತ್ರಿ ಸಾಧ್ಯವಿಲ್ಲ ಎಂದು ಅವರು ಹೇಳಿದರು,ಇದು ಬಿಜೆಪಿಯನ್ನು ವಿರೋಧಿಸುವ ಬಣದ ಪ್ರಮುಖ ಆಧಾರ ಸ್ತಂಭವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷ ಭರ್ಜರಿ ಜಯ ಸಾಧಿಸಿದೆ.ಆದರೆ ಅವರು ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂಡು ಅಧಿಕಾರಿ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. "ನಾನು ನಂದಿಗ್ರಾಮ್ನಲ್ಲಿ ತೀರ್ಪನ್ನು ಒಪ್ಪುತ್ತೇನೆ - ಇದು ದೊಡ್ಡ ವಿಷಯವಲ್ಲ. ಚಿಂತಿಸಬೇಡಿ" ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ (ಏಪ್ರಿಲ್ 1) ನಂದಿಗ್ರಾಮ್ನ ಮತದಾನ ಕೇಂದ್ರದಲ್ಲಿ ಅವ್ಯವಸ್ಥೆ ಆರೋಪ ಮಾಡಿದ ಕೆಲವೇ ಗಂಟೆಗಳ ನಂತರ, ಚುನಾವಣಾ ಆಯೋಗವು ಈ ಬೂತ್ನಲ್ಲಿ ಯಾವುದೇ ಅಡೆತಡೆಗಳಿಲ್ಲ ಎಂದು ಹೇಳಿಕೆ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ 'ಅಮ್ಫಾನ್' ಚಂಡಮಾರುತದಿಂದಾಗಿ ಕನಿಷ್ಠ 72 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ. ಒಟ್ಟು 72 ಸಾವುಗಳಲ್ಲಿ 15 ಕೊಲ್ಕತ್ತಾದವರು ಎಂದು ಮುಖ್ಯಮಂತ್ರಿ ಹೇಳಿದರು.
ಆಯ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಲು ಕಳುಹಿಸಲಾಗಿರುವ ಎರಡು ಮಧ್ಯಂತರ ಕೇಂದ್ರ ತಂಡಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಅನುಮತಿ ನೀಡುವಂತೆ ಕೋರಿ ಗೃಹ ಸಚಿವಾಲಯ ಮಂಗಳವಾರ ಬಂಗಾಳ ಸರ್ಕಾರಕ್ಕೆ ಪತ್ರ ಬರೆದಿದೆ.
ದೇಶಾದ್ಯಂತ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಶುಕ್ರವಾರ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದ ದೀದಿ, ಕಾಯ್ದೆಯ ಅನುಷ್ಠಾನದ ಕುರಿತು ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಮತ್ತು ಈಗಾಗಲೇ ಹಲವು ಜನರ ಸಾವಿಗೆ ಕಾರಣವಾದ ಪ್ರತಿಭಟನೆಗಳನ್ನು ತಡೆಯಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೋಮವಾರದಂದು ಜೈ ಶ್ರೀರಾಮ್ ಘೋಷಣೆ ಕೂಗುವುದಕ್ಕೆ ತಮ್ಮನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಧಿಸಲು ಸವಾಲು ಹಾಕಿದ್ದಾರೆ. ಅಲ್ಲದೆ ಬಂಗಾಳದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಮುಂದಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಕೇಂದ್ರದ ಮಧ್ಯ ಸಂಘರ್ಷ ಮುಂದುವರೆದಿದೆ. ಈಗ ಬಿಜೆಪಿಯ ಉನ್ನತ ಮಟ್ಟದ ನಿಯೋಗವು ಸೋಮವಾರದಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.