ಮಾನ್ಸೂನ್ನಲ್ಲಿ ಜಟಿ-ಜಟಿ ಮಳೆ ಒಂದೆಡೆಯಾದರೆ, ಈ ಸಮಯದಲ್ಲಿ ರೋಗನಿರೋಧಕ ಶಕ್ತಿಯೂ ದುರ್ಬಲಗೊಳ್ಳುತ್ತದೆ. ಹಾಗಾಗಿ, ಮಾನ್ಸೂನ್ನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಲ್ಲದಿದ್ದರೆ, ಋತುಮಾನದ ಕಾಯಿಲೆಗಳಿಂದ ಪಾರಾಗುವುದು ಕಷ್ಟವಾಗಬಹುದು.
ದೇಶದ ಹಲವು ಭಾಗಗಳಲ್ಲಿ ಮಾನ್ಸೂನ್ ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆ ಇಂದೂ ಸಹ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಇಂದು ಯಾವ ರಾಜ್ಯಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ತಿಳಿಯಿರಿ.
ನಿರೀಕ್ಷೆಗೂ ಮುನ್ನವೇ ಈ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಪ್ರಸಕ್ತ ವರ್ಷ ರೈತರಿಗೆ ಎರಡೂ ಹಂಗಾಮಿಗೂ ನೀರಿನ ಕೊರತೆಯಾಗದೆ ಸಮರ್ಪಕವಾಗಿ ಲಭ್ಯವಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರು ಹೇಳಿದರು.
ಸಂಪೂರ್ಣ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಗುರುವಾರದಂದು ಬಾಗಿನ ಸಮರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊಪ್ಪಳ, ವಿಜಯನಗರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ, ಸುಮಾರು 40 ವರ್ಷದ ಬಳಿಕ ಇದೇ ಮೊದಲ ಬಾರಿಗೆ ಜುಲೈ ತಿಂಗಳಿನಲ್ಲಿಯೇ ಅಂದರೆ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಈ ಭಾಗದ ಜನರಲ್ಲಿ ಹರ್ಷವನ್ನು ಉಂಟುಮಾಡಿದೆ.
ಮಳೆಗಾಲ ಆರಂಭವಾಗಿದೆ. ಮಳೆಗಾಲದಲ್ಲಿ ಅನೇಕ ರೋಗಗಳಿಗೆ ಜನ ತುತ್ತಾಗುತ್ತಾರೆ. ಮಳೆಗಾಲದಲ್ಲಿ ಜನರ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇವುಗಳನ್ನು ಸೇವಿಸುವುದರಿಂದ ಮಳೆಗಾಲದಲ್ಲಿ ಉಂಟಾಗುವ ಕಾಯಿಲೆಗಳಿಂದ ದೂರವಿರಬಹುದು.
ರಾಜ್ಯದಲ್ಲಿ ಇತ್ತೀಚಿಗೆ ಆರಂಭವಾಗಿ ಕೊಂಚ ಬಿಡುವು ಪಡೆದುಕೊಂಡಿದ್ದ ಮುಂಗಾರು (Mansoon) ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದ್ದು ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎನ್ನಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮುಸುಕಿನ ಜೋಳವು ಪ್ರಮುಖ ಬೆಳೆಯಾಗಿದ್ದು, ಮುಂಗಾರು ಪ್ರಾರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯಾದ್ಯಂತ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಬಿತ್ತನೆಯಿಂದ ಹಿಡಿದು 15 ರಿಂದ 20 ದಿನದ ಮೆಕ್ಕೆಜೋಳ ಬೆಳೆಯನ್ನು ಕಾಣಬಹುದಾಗಿದೆ.
ಗುಡುಗು ಸಹಿತ ಮಳೆಯಿಂದಾಗಿ ತಾಜ್ ಮಹಲ್ ಸಂಕೀರ್ಣದ ಮುಖ್ಯ ಭಾಗ ಮತ್ತು ಅದರ ಐದು ಎತ್ತರದ ಗುಮ್ಮಟಗಳ ಕೆಳಗಿರುವ ಕೆಲವು ಭಾಗಗಳನ್ನು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿರುವುದರಿಂದ ಕುಮಾರಧಾರ, ಕೆಂಪುಹೊಳೆ, ಎತ್ತಿನಹಳ್ಳಗಳಲ್ಲಿ ನೀರಿನ ಹರಿವು ಕಂಡು ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆ ಅಲ್ಪ ಮಟ್ಟಿಗೆ ಬಗೆಹರಿದಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.