Vice Presidential Election 2022:ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ದೇಶದ ಮುಂದಿನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕಡ್ ಆಯ್ಕೆಗೊಂಡಿದ್ದಾರೆ. ಒಟ್ಟು 780 ಸಂಸದರ ಪೈಕಿ 724 ಸಂಸದರು ತಮ್ಮ ಮತ ಚಲಾಯಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಗೆ ಇಂದು ಬೆಳಗ್ಗೆ 10 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಯಿತು. ಚುನಾವಣೆಯಲ್ಲಿ ಒಟ್ಟು 725 ಸಂಸದರು ಮತ ಚಲಾಯಿಸಿದ್ದು, 50ಕ್ಕೂ ಹೆಚ್ಚು ಅಭ್ಯರ್ಥಿಗಳು ಮತದಾನ ಮಾಡಿಲ್ಲ.
ಉಪರಾಷ್ಟ್ರಪತಿಗಳೇ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವುದರಿಂದ ಇಂದು ಈ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುವುದು. ಬೆಳಗ್ಗೆ 10ರಿಂದ ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯ ಮತದಾನದ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದೆ.
Margaret Alva: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಕರ್ನಾಟಕದ ಮಾರ್ಗರೇಟ್ ಆಳ್ವ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ. ಅವರು ಐದು ಅವಧಿಯ ಸಂಸತ್ ಸದಸ್ಯೆಯಾಗಿದ್ದರು. ಕೇಂದ್ರ ಸಚಿವೆ ಮತ್ತು ಗವರ್ನರ್ ಆಗಿಯೂ ಮಾರ್ಗರೆಟ್ ಆಳ್ವ ಸೇವೆ ಸಲ್ಲಿಸಿದ್ದಾರೆ.
Vice President Election 2022: NDA ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ಒಂದು ದಿನ ಬಳಿಕ ವಿಪಕ್ಷಗಳೂ ಕೂಡ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿವೆ. ಮಾರ್ಗಾರೆಟ್ ಆಳ್ವಾ ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ಎಲ್ಲಾ ಪ್ರತಿಪಕ್ಷಗಳ ಸಭೆಯ ಬಳಿಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗಾರೆಟ್ ಆಳ್ವಾ ಅವರ ಹೆಸರಿನ ಘೋಷಣೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.