Arrest Warrent Against Masood Azhar: ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕನೆಂದು ಘೋಷಿಸಲ್ಪಟ್ಟ ಜೈಷ್ -ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಟೆರರ್ ಫಂಡಿಂಗ್ ಪ್ರಕರಣದಲ್ಲಿ ಜನವರಿ 18 ರೊಳಗೆ ಬಂಧಿಸಬೇಕು ಎಂದು ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಪಂಜಾಬ್ ಪೊಲೀಸರಿಗೆ ಆದೇಶಿಸಿದೆ.
ಪುಲ್ವಾಮಾ ಭಯೋತ್ಪಾದಕ ದಾಳಿಯ ಜವಾಬ್ದಾರಿ ಹೊತ್ತಿದ್ದ ಜೈಷ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಸಂಘಟನೆಯ ಮುಖಂಡ ಮೌಲಾನಾ ಮಸೂದ್ ಅಜರ್'ನನ್ನು ಪಾಕಿಸ್ತಾನ ಎಂದಿಗೂ ಜೈಲಿನಲ್ಲಿ ಇಟ್ಟುಕೊಂಡಿಲ್ಲ.
ಭಯೋತ್ಪಾದಕ ಮಸೂದ್ ಅಜರ್ ಅವರನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈಗ ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಈ ಹಿಂದೆ ನಾಲ್ಕು ಬಾರಿ ಅವರನ್ನು ಈ ಪಟ್ಟಿಗೆ ಸೇರಿಸುವಲ್ಲಿನ ಭಾರತದ ಯತ್ನಕ್ಕೆ ಚೀನಾ ಅಡ್ಡಿಯುಂಟು ಮಾಡಿತ್ತು. ಈಗ ಅದು ಭದ್ರತಾ ಮಂಡಳಿಯಲ್ಲಿ ತನ್ನ ನಿರ್ಬಂಧಗಳನ್ನು ಕೈ ಬಿಟ್ಟ ಹಿನ್ನಲೆಯಲ್ಲಿ ವಿಶ್ವಸಂಸ್ಥೆ ಮಸೂದ್ ಅಜರ್ ರನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ '1267 ಅಲ್ ಖೈದಾ ನಿರ್ಬಂಧಗಳ ಸಮಿತಿ' ಅಡಿಯಲ್ಲಿ, ಮಸೂದ್ ಅಜರ್ನನ್ನು ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾಪವನ್ನು ಫೆಬ್ರವರಿ 27 ರಂದು ಫ್ರಾನ್ಸ್, ಬ್ರಿಟನ್ ಮತ್ತು ಅಮೆರಿಕಾ ಸಂಯುಕ್ತ ಸಂಸ್ಥಾನಗಳು ತಂದಿದ್ದವು.
ಭಯೋತ್ಪಾಧನೆ ನಿಯಂತ್ರಣ ವಿಚಾರವಾಗಿ ಅಂತರಾಷ್ಟ್ರೀಯ ಸಮುದಾಯದಿಂದ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆ ಉಗ್ರ ಮಸೂದ್ ಸಹೋದರ ಮುಫ್ತಿ ಅಬ್ದುಲ್ ರೌಫ್ ರನ್ನು ಪಾಕ್ ವಶಕ್ಕೆ ಪಡೆದುಕೊಂಡಿದೆ. ಇದುವರೆಗೆ ಪಾಕ್ ಸುಮಾರು 44 ಜನರನ್ನು ಪಾಕ್ ಬಂಧಿಸಿದ್ದು, ಅದರಲ್ಲಿ ಮುಫ್ತಿ ಅಬ್ದುಲ್ ರೌಫ್ ಒಬ್ಬ ಎಂದು ತಿಳಿದು ಬಂದಿದೆ.
ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝರ್ ಸತ್ತಿಲ್ಲ ಇನ್ನು ಜೀವಂತವಾಗಿದ್ದಾನೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.ಸಾಮಾಜಿಕ ಮಾಧ್ಯಮಗಳಲ್ಲಿ ಅವನು ಸತ್ತಿದ್ದಾನೆ ಎನ್ನುವ ವರದಿ ಬಂದ ಹಿನ್ನಲೆಯಲ್ಲಿ ಈಗ ಪಾಕ್ ಮಾಧ್ಯಮಗಳು ಸ್ಪಷ್ಟಪಡಿಸಿವೆ.
ಉಗ್ರ ಮಸೂದ್ ಅಜರ್ನನ್ನು ಕಪ್ಪು ಪಟ್ಟಿಗೆ ಸೇರಿಸುವುದು, ಜಾಗತಿಕ ಪ್ರವೇಶಕ್ಕೆ ನಿಷೇಧ ಹೇರುವುದು ಸೇರಿದಂತೆ ಆತನಿಗೆ ಸೇರಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವಂತೆ ಮಾಡಲು ಮೂರನೇ ಬಾರಿಗೆ ಪ್ರಯತ್ನ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.