ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಲೋಕಸಭೆ ಚುನಾವಣೆಯಲ್ಲಿ ತಲಾ 38 ಸ್ಥಾನಗಳಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಆದರೆ ಈ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎರಡು ಪಕ್ಷಗಳು ಹೊರಗಿಟ್ಟಿವೆ.ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ.ಇನ್ನುಳಿದ ಎರಡು ಸ್ಥಾನಗಳನ್ನು ಮೈತ್ರಿ ಪಕ್ಷಕ್ಕೆ ನೀಡಲಾಗಿದೆ.
ಅಖಿಲೇಶ್ ಯಾದವ್ ಮತ್ತು ಮಾಯಾವತಿ ಉತ್ತರಪ್ರದೇಶದ ಲಕ್ನೋದಲ್ಲಿರುವ ಪಂಚತಾರಾ ಹೋಟೆಲ್ ವೊಂದರಲ್ಲಿನ ನಾಳೆ ಪತ್ರಿಕಾಗೋಷ್ಠಿ ನಡೆಸಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿನ ಮೈತ್ರಿ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಮುಂಬರುವ ಛತ್ತೀಸ್ ಗಡ್ ಮತ್ತು ಸಾರ್ವತ್ರಿಕ ಲೋಕಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅಜಿತ್ ಜೋಗಿ ತಾವು ಚತ್ತೀಸ್ ಗಡ್ ದ ಮುಖ್ಯಮಂತ್ರಿಯಾದರೆ ಮಾಯಾವತಿ ಪ್ರಧಾನಿಯಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.
ಮಧ್ಯಪ್ರದೇಶ ಮತ್ತು ರಾಜಸ್ಥಾನದ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದೆ,ಮುಬರುವ ಈ ಎರಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಯಾವುದೇ ಮೈತ್ರಿ ಇಲ್ಲ ಎನ್ನುವ ಮೂಲಕ ಈಗ ಕಾಂಗ್ರೆಸ್ ಗೆ ಬಿಎಸ್ಪಿ ಮಾಯಾವತಿ ಶಾಕ್ ನೀಡಿದ್ದಾರೆ.
ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿರುವ ಬಿಜೆಪಿ ಸರ್ಕಾರಗಳು ವಿವಿಧ ತಂತ್ರಗಳ ಮೂಲಕ ತಮ್ಮ ವೈಪಲ್ಯವನ್ನು ಮರೆಮಾಚಲು ಯತ್ನಿಸುತ್ತಿವೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಬಿಜೆಪಿ ವಿರುದ್ಧ ಕಿಡಿ ಕಾರಿದರು.ಅಲ್ಲದೆ ರಾಜಕೀಯ ಲಾಭಕ್ಕಾಗಿ ವಾಜಪೇಯಿಯವರ ಸಾವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರತಿಪಕ್ಷಗಳ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲು ತಮ್ಮದು ಯಾವುದೇ ಅಭ್ಯಂತರವಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.