ಕನಕಗಿರಿ ಶಾಸಕ ಬಸವರಾಜ ದಡೇಸಗೂರು ಭಾಷಣದ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರಟಗಿಯಲ್ಲಿ ಕೃಷಿ ಕರ್ನಾಟಕ ರಾಜ್ಯ ರೈತ ಸಂಘ ಉದ್ಘಾಟಿಸಿ ಮಾತನಾಡಿದ ಬಸವರಾಜ ದಡೇಸಗೂರು, ರೈತ ಆತ್ಮಹತ್ಯೆ ಮಾಡಿಕೊಂಡರೆ ಮಾತ್ರ ನಮಗೆ ರೈತನ ಕಷ್ಟ ಏನು ಅನ್ನೋದು ಗೊತ್ತಾಗುತ್ತೆ. ರೈತರು ಸುಮ್ಮನಿದ್ರೆ ನಮಗೆ ಹೇಗೆ ಗೊತ್ತಾಗುತ್ತೆ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಎಚ್.ಡಿ.ರೇವಣ್ಣನವರಿಗೆ ಅಷ್ಟೊಂದು ಲೆಕ್ಕ ಬರುವುದಿಲ್ಲ. ನನ್ನ ಬಗ್ಗೆ ಮಾತನಾಡುವುದನ್ನು ಬಿಟ್ಟು ಹೊಳೆನರಸೀಪುರ ಕ್ಷೇತ್ರದ ಬಗ್ಗೆ ತಲೆಕೆಡಿಸಿಕೊಳ್ಳಲಿ ಎಂದು ಶಾಸಕ ಪ್ರೀತಂ ಜೆ ಗೌಡ ತಿರುಗೇಟು ನೀಡಿದರು.
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಮತ್ತು ಕೃಷಿ ಪರವಾದ ಆಡಳಿತವನ್ನು ಗಮನಿಸಿ ಜನರು ಬಿಜೆಪಿ(BJP) ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಿಂದ ಹೊಸಕೋಟೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎಂಟಿಬಿ ನಾಗರಾಜ್ ವಿರುದ್ಧ ಗೆಲುವನ್ನು ಸಾಧಿಸಿದ್ದಂತ ಶರತ್ ಬಚ್ಚೇಗೌಡ, ಕಾಂಗ್ರೆಸ್ ಸೇರ್ಪಡೆ
ಮಹಿಳಾ ಅರಣ್ಯಾಧಿಕಾರಿ (ಎಫ್ಆರ್ಒ) ಮೇಲೆ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ಸಿರ್ಪುರ ಶಾಸಕ ಕೊನೆರು ಕೊನಪ್ಪ ಅವರ ಸಹೋದರ ಕೊನೇರು ಕೃಷ್ಣ ರಾವ್ ಅಧಿಕಾರಿಣಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೃಷ್ಣ ರಾವ್ ಇತ್ತೀಚೆಗೆ ಕೊಮರಾಮ್ ಭೀಮ್ ಆಸಿಫಾಬಾದ್ ಜಿಲ್ಲಾ ಪರಿಷತ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಪಕ್ಷದ ನಿಯಮಗಳನ್ನು ಗಾಳಿಗೆ ತೂರಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಅಧಿಕೃತ ದೂರು ನೀಡಿದೆ.
ಬಹುಜನ ಸಮಾಜ ಪಕ್ಷದ ಶಾಸಕಿ ರಮಾಬಾಯಿ ಸಿಂಗ್ ತಾನು ಎಲ್ಲ ಸಚಿವರ ಬಾಪ್ ಎಂದು ಹೇಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ತನಗೆ ಮತ್ತು ಇತರ ಬಿಎಸ್ಪಿ ಶಾಸಕರಿಗೆ ಮಂತ್ರಿಗಿರಿ ನೀಡದೆ ಹೋದಲ್ಲಿ ಕರ್ನಾಟಕದ ರೀತಿಯ ರಾಜಕೀಯ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.