ಜನಸಮೂಹ ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದ ಇತಿಹಾಸಕಾರ ರಾಮಚಂದ್ರ ಗುಹಾ, ಮಣಿರತ್ನಂ ಮತ್ತು ಅಪರ್ಣ ಸೇನ್ ಸೇರಿದಂತೆ ಸುಮಾರು 50 ಗಣ್ಯರ ವಿರುದ್ಧ ಬಿಹಾರದ ಮುಜಾಫರ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ತಬ್ರೇಝ್ ಅನ್ಸಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಅಟಾಪ್ಸಿ ವರದಿ ನೀಡಿದ ಹಿನ್ನೆಲೆಯಲ್ಲಿ, ಸಾಮೂಹಿಕ ಹಲ್ಲೆ ಪ್ರಕರಣದಲ್ಲಿ 11 ಆರೋಪಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ.
ಬಿಹಾರದ ರಾಜಧಾನಿ ಪಾಟ್ನಾ ಬಳಿಯ ದಾನಾಪುರದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿದ ಕೆಲವೇ ಗಂಟೆಗಳ ನಂತರ, ಬಿಹಾರ ಪೊಲೀಸರು ಆರು ಮಹಿಳೆಯರು ಸೇರಿದಂತೆ 32 ಜನರನ್ನು ಬಂಧಿಸಿದ್ದಾರೆ. ಈ ಪ್ರದೇಶದಲ್ಲಿ ಮಕ್ಕಳ ಕಳ್ಳತನದ ಅನುಮಾನದ ಮೇಲೆ ವ್ಯಕ್ತಿಯನ್ನು ಹತ್ಯೆಗೈದರೆ ಇನ್ನಿಬ್ಬರನ್ನು ಥಳಿಸಲಾಯಿತು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.