ಪಡಿತದಾರರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುವ ವೇಳೆಯಲ್ಲಿ ಒಟ್ಟು 299 ನ್ಯಾಯಬೆಲೆ ಅಂಗಡಿಗಳ ಮೇಲೆ ತಪಾಸಣೆ ನಡೆಸಿ ತೂಕದಲ್ಲಿ ಕಡಿಮೆ ಪಡಿತರವನ್ನು ವಿತರಣೆ ಮಾಡಿದ 14 ನ್ಯಾಯಬೆಲೆ ಅಂಗಡಿಗಳ ಮೇಲೆ ಮೊಕದ್ದಮ್ಮೆ ಹೂಡಿ 58,000 ರೂ.ಗಳ ದಂಡ ವಸೂಲಿ ಮಾಡಲಾಗಿದೆ.
ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಇಲ್ಲವೇ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ.
ರಾಜ್ಯದ ಎಲ್ಲಾ ಎಪಿಎಂಸಿ ಮಾರುಕಟ್ಟೆಯಲ್ಲಿ ಕಡ್ಡಾಯವಾಗಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡಿ ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಮನದಟ್ಟು ಮಾಡಬೇಕು. ಮಾರುಕಟ್ಟೆಗೆ ಬರುವಂತಹ ಎಲ್ಲಾ ರೈತರಿಗೆ ಹಾಗೂ ವರ್ತಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ತಿಂಡಿ, ಊಟ ಸೌಲಭ್ಯ ಸಿಗಬೇಕು ಎಂದು ಸಚಿವ ಎಸ್. ಟಿ. ಸೋಮಶೇಖರ್ ಸೂಚಿಸಿದರು.
ಕೊರೋನಾವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದರ ಪರಿಣಾಮ ಈಗ ರಾಜ್ಯದಲ್ಲಿಯೂ ಕೂಡ ಬೀರಿದೆ. ಈ ಹಿನ್ನಲೆಯಲ್ಲಿ ವಿಶೇಷವಾಗಿ ರಾಜ್ಯದಲ್ಲಿನ ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ವಿಚಾರವಾಗಿ ಸ್ವತಃ ಪ್ರಧಾನಿ ಕಚೇರಿ ಕಾಳಜಿ ವಹಿಸುತ್ತಿದೆ.
ರಾಜ್ಯದಲ್ಲಿ ಹೊಸದಾಗಿ ರೇಷನ್ ಕಾರ್ಡ್ ಗೆ 2.5 ಲಕ್ಷ ಅರ್ಜಿಗಳು ಬಂದಿದ್ದು, ಅವರೆಲ್ಲರಿಗೂ ಸಹ ರೇಷನ್ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು ಎರಡು ಮೂರು ದಿನದಲ್ಲಿ ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ನೋಟು ಅಮಾನ್ಯೀಕರಣದ ಬಳಿಕ ನೋಟು ಬದಲು ಮಾಡಲು ಬಂದಿದ್ದ ಮುಂಬೈ ಮೂಲದ ಗ್ಯಾಂಗ್ ಬಗ್ಗೆ ಖಚಿತ ಮಾಹಿತಿ ದೊರೆತ ಬಳಿಕ ವಿಜಯನಗರ ಇನ್ಸ್ ಪೆಕ್ಟರ್ ಬಿ.ಜಿ.ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ್ದರು ಎಂದು ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಅವರನ್ನ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದರು.
ಹಣ ಕೊಟ್ಟ ತಕ್ಷಣ ಬಡತನ ದೂರವಾಗುವುದಿಲ್ಲ. ಕರ್ನಾಟಕದಲ್ಲೂ ಕಡು ಬಡವರು, ಅಸಹಾಯಕರು ಇದ್ದಾರೆ. ಅವರಿಗೆ ಒಳಿತು ಮಾಡುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಹಾಗಾಗಿ ಬಿಎಸ್ಪಿ ಬಡವರಿಗೆ ಉದ್ಯೋಗ ಕೊಟ್ಟು ಬಡತನ ನಿರ್ಮೂಲನ ಮಾಡುವ ಪಣ ತೊಟ್ಟಿದೆ ಎಂದು ಮಾಯಾವತಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.