ರಾಜ್ಯದಲ್ಲಿರುವ ನಮ್ಮ ಕ್ಲಿನಿಕ್ ಗಳಲ್ಲಿ ಶೇ 25 ರಷ್ಟು ಕ್ಲಿನಿಕ್ ಗಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ನಮ್ಮ ಕ್ಲಿನಿಕ್ ಗಳನ್ನ ಸಂಜೆ ಕ್ಲಿನಿಕ್ ಮಾದರಿಯಲ್ಲಿ ಸಮಯ ಬದಲಾಯಿಸಲು ನಿರ್ಧರಿಸಲಾಗಿದ್ದು, 12 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ಕಾರ್ಯನಿರ್ವಸುವಂತೆ ತಯಾರಿ ನಡೆಸಲಾಗಿದೆ.
ಎನ್ಎಚ್ಎಂನ ನಿರ್ದೇಶಕ ಡಾ.ನವೀನ್ ಭಟ್ ಮಾತನಾಡಿ, ರಾಜ್ಯದಲ್ಲಿ 50 ಕ್ಲಿನಿಕ್ಗಳು ಕಾರ್ಯಾಚರಣೆ ಮಾಡಲು ಸಿದ್ಧವಾಗಿವೆ. 128 ಕ್ಲಿನಿಕ್ಗಳ ಪೈಕಿ 70 ಕ್ಲಿನಿಕ್ ಗಳನ್ನು ಮಾರ್ಚ್ ಅಂತ್ಯದೊಳಗೆ ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್ಗಳು ಏಕಕಾಲಕ್ಕೆ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ ಸ್ಥಾಪಿಸಲಾಗುವ “ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞನರು ಹಾಗೂ ನಾಲ್ಕನೇ ದರ್ಜೆ ನೌಕರರು ಸೇರಿದಂತೆ ತಲಾ 8 ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಆಯ್ಕೆ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.