ರಾಷ್ಟ್ರೀಯ ಲೋಕ್ ಅದಾಲತ್ ನ್ನು ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿತ್ತು. ಲೋಕ್ ಅದಾಲತ್ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಕೆ. ಜಿ. ಶಾಂತಿ ಅವರ ಮಾರ್ಗದರ್ಶನದಲ್ಲಿ ಧಾರವಾಡದಲ್ಲಿ-13 ಪೀಠಗಳನ್ನು, ಹುಬ್ಬಳ್ಳಿಯಲ್ಲಿ-18 ಪೀಠಗಳನ್ನು, ಕುಂದಗೋಳ-02 ನವಲಗುಂದ-02 ಮತ್ತು ಕಲಘಟಗಿಯಲ್ಲಿ-02, ಒಟ್ಟು 37 ಪೀಠಗಳನ್ನು ಸ್ಥಾಪಿಸಲಾಗಿತ್ತು.
ಕರ್ನಾಟಕ ರಾಜ್ಯಾದ್ಯಂತ ಇದೇ ಡಿಸೆಂಬರ್ 9, 2023ರಂದು ಬೃಹತ್ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯನಿರ್ವಾಹಕ ಅಧ್ಯಕ್ಷರಾದ ಪಿ.ಎಸ್.ದಿನೇಶ್ ಕುಮಾರ್ ತಿಳಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯ,ಧಾರವಾಡ ಪೀಠದಲ್ಲಿ ಇಂದು (ಡಿ.18) ರಂದು ರಾಷ್ಟ್ರೀಯ ಲೋಕ ಅದಾಲತ್ನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್ ಅವರ ಮಾರ್ಗದರ್ಶನದಲ್ಲಿ ಏರ್ಪಡಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.