ವಿವಿಧ ತಳಿಯ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿ ಜಿಲ್ಲೆಯಾದ್ಯಂತ ಸಿರಿಧಾನ್ಯ ಬೆಳವಳಿಣಿಗೆಗೆ ಹೆಚ್ಚು ಒತ್ತು ನೀಡಲಾಗುವುದೆಂದರು. ಅತಿಥಿಗಳೆಲ್ಲರು ಸಾವಯವ ಬೆಲ್ಲದ ಚಹಾ ಹಾಗೂ ಮಿಲೆಟ್ ಗಂಜಿಯನ್ನು ಸೇವಿಸಿದರು.
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ಮೋದಿಯವರು ಕರೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು.
ಅವಳಿನಗರದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದರು. ಯುವಜನೋತ್ಸವದ ಮೊದಲ ದಿನ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆಸಿ ನಾರಾಯಣಗೌಡ ದೀಪ ಬೆಳಗಿಸಿ ಚಾಲನೆ ನೀಡಿದರು.
26ನೇ ರಾಷ್ಟ್ರೀಯ ಯುವಜನೋತ್ಸವದ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್ಶೋ ನಡೆಸುತ್ತಿದ್ದ ವೇಳೆ ಭಾರಿ ಭದ್ರತಾ ಲೋಪ ಎಸಗಿರುವ ಘಟನೆ ವರದಿಯಾಗಿದೆ. ಗೇಟ್ ಹಾರಿ ಹಾರ ಹಾಕಲು ಯತ್ನಿಸಿದ ಯುವಕನೊಬ್ಬ ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡು ಯುವಕನನ್ನು ಭದ್ರತಾ ಸಿಬ್ಬಂದಿ ಎಳೆದೊಯ್ದಿದ್ದಾರೆ.
26ನೇ ಯುವ ರಾಷ್ಟ್ರೀಯ ಯುವ ಜನೋತ್ಸವ ಹಿನ್ನೆಲೆ ಇಂದು ಪಿಎಂ ಮೋದಿಯವರಿಂದ ಜನೋತ್ಸವ ಉದ್ಘಾಟನೆ. ಕಾರ್ಯಕ್ರಮಕ್ಕೆ ಭಾರೀ ಬಿಗಿ ಭದ್ರತೆ ಒದಗಿಸಿದ ಪೊಲೀಸ್. ಹುಬ್ಬಳ್ಳಿಯಲ್ಲಿ 2900 ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆ. ಭದ್ರತೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ
ಇಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಮೇನಿಯಾ..! ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ʻಕೇಸರಿ ಕಲರವʼ..! ರಾಷ್ಟ್ರೀಯ ಯುವಜನೋತ್ಸವ ಮೂಲಕ ಮೋದಿ ಮೋಡಿ. ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ನೀಡಲಿರುವ ಮೋದಿ.
ಇಂದಿನಿಂದ ಧಾರವಾಡದಲ್ಲಿ ಆರು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಯುವಜನೋತ್ಸವಕ್ಕೆ ನಾಡಿನ ವಿವಿಧ ಮೂಲೆಗಳಿಂದ ರೈಲುಗಳಲ್ಲಿ ಯುವ ಕಲಾವಿದರು ಆಗಮಿಸುತ್ತಿದ್ದು, ವಿಶೇಷವಾದ ಸ್ವಾಗತ ಕೋರಲಾಗುತ್ತಿದೆ. ಕಲಾವಿದರೊಂದಿಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.
ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಉದ್ಘಾಟನೆಗೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1ರಿಂದ 10ನೇ ತರಗತಿವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಒಂದು ದಿನ ರಜೆ ಘೋಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಹಿನ್ನೆಲೆ ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್. ರಾಜ್ಯಪಾಲರನ್ನ ಸ್ವಾಗತಿಸಿದ ಸಚಿವ ಡಾ.ನಾರಾಯಣಗೌಡ. ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ರಾಜ್ಯಪಾಲರು.
ಇಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಮೇನಿಯಾ..! ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ʻಕೇಸರಿ ಕಲರವʼ..! ರಾಷ್ಟ್ರೀಯ ಯುವಜನೋತ್ಸವ ಮೂಲಕ ಮೋದಿ ಮೋಡಿ. ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ನೀಡಲಿರುವ ಮೋದಿ.
ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ತಿತರಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.