BSF Kills Naxal commander Shankar Rao: ಮಂಗಳವಾರ ಮಧ್ಯಾಹ್ನ ನಡೆದ ಎನ್ಕೌಂಟರ್ನಲ್ಲಿ ಹಿರಿಯ ಬಂಡಾಯ ನಾಯಕ ಶಂಕರ್ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. AK-47 ಮತ್ತು INSAS ರೈಫಲ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭವಿಷ್ಯದಲ್ಲಿ ಯಾವುದೇ ಪ್ರಮುಖ ಬೆದರಿಕೆಯನ್ನು ಎದುರಿಸಲು ಸಿದ್ಧರಾಗಿರಲು NSG ಸಹಾಯ ಪಡೆಯಬಹುದಾಗಿದೆ. ಕಳೆದ ವರ್ಷವೂ ಎನ್ಎಸ್ಜಿ ತಂಡವು ಆಂಧ್ರಪ್ರದೇಶದ ಗ್ರೇ ಹೌಂಡ್ಸ್ನೊಂದಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತರಬೇತಿ ಪಡೆದಿತ್ತು.
Maharashtra Encounter: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆಸಲಾದ ಎನ್ಕೌಂಟರ್ನಲ್ಲಿ 38 ಲಕ್ಷ ಬಹುಮಾನ ಹೊಂದಿದ್ದ 3 ನಕ್ಸಲೀಯರನ್ನು ಹತ್ಯೆಗೈಯಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸ್ ತಂಡದ ಮೇಲೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದು, ನಂತರ ಪ್ರಾಣ ರಕ್ಷಣೆಗಾಗಿ ಪೊಲೀಸರು ನಡೆಸಿದ ಫೈರಿಂಗ್ ನಲ್ಲಿ ನಕ್ಸಲೀಯರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲರ ಗುಂಪೊಂದು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 11 ಟ್ರ್ಯಾಕ್ಟರ್ಗಳು ಮತ್ತು ಎರಡು ಜೆಸಿಬಿ ಯಂತ್ರಗಳಿಗೆ ಬೆಂಕಿ ಹಚ್ಚಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Chattisgarh: Encounter - ಛತ್ತಿಸ್ಗಡ್ ದಲ್ಲಿ ಮತ್ತೊಮ್ಮೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಸಂಭವಿಸಿದೆ. ಬಿಜಾಪುರ್ ಜಿಲ್ಲೆಯಲ್ಲಿ ನಡೆದ ಈ ಎನ್ಕೌಂಟರ್ ನಲ್ಲಿ ಐವರು ಜವಾನರು ಹುತಾತ್ಮರಾಗಿದ್ದಾರೆ.
Jharkhand IED Blast News: 'ರಾಜ್ಯ ಪೊಲೀಸರ ಜಾರ್ಖಂಡ್ ಜುಗರ್ನ 2 ಸೈನಿಕರು ಸಾವನ್ನಪ್ಪಿದ್ದರೆ, 2 ಜನರಿಗೆ ಗಂಭೀರ ಗಾಯಗಳಾಗಿವೆ. ಬೆಟಾಲಿಯನ್ ಸಿಆರ್ಪಿಎಫ್ ಜವಾನ್ ಗಾಯಗೊಂಡಿದ್ದಾರೆ ಎಂದು ಸಿಆರ್ಪಿಎಫ್ ಹೇಳಿದೆ.
ಈ ಘಟನೆಯ ಹಿನ್ನೆಲೆಯಲ್ಲಿ, ಕಂಕರ್ನ ಎಸ್ಪಿ ಕೂಡ ಸ್ಥಳಕ್ಕೆ ತಲುಪಿದ್ದಾರೆ. ಮುನ್ನೆಚ್ಚರಿಕೆಯಾಗಿ, ಭನುಪ್ರತಾಪುರ ಮತ್ತು ನಾರಾಯಣ್ ಪುರವನ್ನು ಸಂಪರ್ಕಿಸುವ ರಸ್ತೆಯನ್ನು ಕೆಲವು ಗಂಟೆಗಳ ಕಾಲ ಮುಚ್ಚಲಾಗಿದ್ದು, ಸೈನಿಕರು ನಕ್ಸಲರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಜಾರ್ಖಂಡ್ನ ಖುಂಟಿ ಜಿಲ್ಲೆಯ ಗಡಿ ಪ್ರದೇಶದ ಬಳಿ ಗುಡ್ರಿಯ ಥೋಲ್ಕೊಬೆರಾದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ಎನ್ಕೌಂಟರ್ನಲ್ಲಿ ಓರ್ವ ನಕ್ಸಲ್ನನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಛತ್ತೀಸ್ ಗಡ್ ದ ರಾಜನಂದಗಾಂವ್ನ ಸೀತಗೋಟ ಕಾಡು ಪ್ರದೇಶದಲ್ಲಿ ಶನಿವಾರ ಜಿಲ್ಲಾ ಮೀಸಲು ಪಡೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ನಕ್ಸಲರು ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಛತ್ತೀಸ್ ಗಡ್ ದ ಬಿಜಾಪುರ ಜಿಲ್ಲೆಯ ಕೇಶಕುತುಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಕನಿಷ್ಠ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಮೂವರು ಸೈನಿಕರಲ್ಲಿ ಕರ್ನಾಟಕದ ಯೋಧರೊಬ್ಬರು ಸಹಿತ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಇಲ್ಲಿನ ಮಾಲೆಪರಾದಲ್ಲಿ ನಕ್ಸಲರು ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಡಿಐಜಿ ಪಿ. ಸುಂದರರಾಜ್ ಶುಕ್ರವಾರ ತಿಳಿಸಿದ್ದಾರೆ.
ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಭದ್ರತಾ ಸಿಬ್ಬಂದಿಯೊಬ್ಬ ತನ್ನ ಜೀವವನ್ನು ಕಳೆದುಕೊಂಡಿದ್ದಾನೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ದುಮ್ಕಾ ಪೊಲೀಸ್ ಅಧೀಕ್ಷಕ ಎಸ್.ಪಿ.ರಮೇಶ್ ಎಎನ್ಐಗೆ ತಿಳಿಸಿದ್ದಾರೆ.
ದಂತೇವಾಡಾ ನಕ್ಸಲ್ ದಾಳಿ ವಿಚಾರವಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಮಾವೋವಾದಿ ಕಮ್ಯುನಿಸ್ಟ್ ಪಾರ್ಟಿ ತಮ್ಮ ಉದ್ದೇಶ ಮಾಧ್ಯಮದವರನ್ನು ಕೊಲ್ಲುವುದಾಗಿರಲಿಲ್ಲ ಎಂದು ಎರಡು ಪುಟಗಳ ಕೈ ಪತ್ರದಲ್ಲಿ ತಿಳಿಸಿದೆ.
ಆರುಕು ಎಂಎಲ್ಎ ಕಿದಾರಿ ಸರ್ವೇಶ್ವರ ರಾವ್ ಸೇರಿದಂತೆ ಇಬ್ಬರು ತೆಲುಗು ದೇಶಂ ನಾಯಕರು ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ದುಂಬ್ರಿಗುಡಾ ಮಂಡಲ್ನಲ್ಲಿ ಭಾನುವಾರ ಮಧ್ಯಾಹ್ನ ಮಹಿಳಾ ನಕ್ಸಲರಿಂದ ಹತ್ಯೆಗಿಡಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.