India vs New Zealand 2024: ಮೊದಲ ಟೆಸ್ಟ್ನಲ್ಲಿ ಸೋತ ನಂತರ, ಭಾರತವು ಎರಡನೇ ಟೆಸ್ಟ್ನಲ್ಲಿ ಗೆದ್ದು ಸರಣಿಯನ್ನು ಸಮಬಲಗೊಳಿಸಲು ಬಯಸಿದೆ. ಈ ಹಿನ್ನಲೆಯಲ್ಲಿ ಸ್ಟಾರ್ ಆಲ್ ರೌಂಡರ್ ಗೆ ಅವಕಾಶ ನೀಡಲಾಗಿದೆ. ಆಲ್ ರೌಂಡರ್ ಮೂರು ವರ್ಷಗಳ ನಂತರ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದು, ಇದರೊಂದಿಗೆ ಪುಣೆಯಲ್ಲಿ ರೋಹಿತ್ ಸೇನೆ ತನ್ನ ಶಕ್ತಿ ಪ್ರದರ್ಶನ ಮಾಡುವ ನಿರೀಕ್ಷೆಯಲ್ಲಿದೆ.
Sarfaraj khan: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಅಪರೂಪದ ಸಾಧನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸರ್ಫರಾಜ್ ಖಾನ್ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ. 110 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಟೆಸ್ಟ್ ಮಾದರಿಯಲ್ಲಿ ಸರ್ಫರಾಜ್ ಖಾನ್ ಅವರ ಮೊದಲ ಶತಕವಾಗಿದೆ. ಶುಭಮನ್ ಗಿಲ್ ಗಾಯಗೊಂಡ ನಂತರ ಅನಿರೀಕ್ಷಿತವಾಗಿ ತಂಡಕ್ಕೆ ಬಂದ ಸರ್ಫರಾಜ್ ಖಾನ್ ಮೊದಲ ಇನ್ನಿಂಗ್ಸ್ನಲ್ಲಿ ಡಕೌಟ್ ಆಗಿದ್ದರು. ಎರಡನೇ ಇನ್ನಿಂಗ್ಸ್ನಲ್ಲಿ ನಿರ್ಣಾಯಕ ಸಮಯದಲ್ಲಿ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದರು.
New Zealand team Remuneration: ಪ್ರಸಕ್ತ ಸಾಲಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಮುಕ್ತಾಯಗೊಂಡಿದೆ. ಈ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ಈಗ ತಂಡಕ್ಕೆ ಹೊಸ ನಾಯಕನ ಅಗತ್ಯವಿದೆ ಈ ಸಂದರ್ಭದಲ್ಲಿ ನೂತನ ನಾಯಕನ ಹೆಸರು ಹಾರ್ದಿಕ್ ಪಾಂಡ್ಯ ಆಗಿದ್ದಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ರೌಫ್ ನಾಲ್ಕು ಓವರ್ಗಳಲ್ಲಿ 22 ರನ್ ನೀಡಿ 2 ವಿಕೆಟ್ ಪಡೆದಿದ್ದಾರೆ. ಡೆವೊನ್ ಕಾನ್ವೇ ಮತ್ತು ಇಶ್ ಸೋಧಿ ಅವರ ಪ್ರಮುಖ ವಿಕೆಟ್ಗಳನ್ನು ಪಡೆದಿದ್ದಾರೆ. ಇನ್ನು ಕೇನ್ ವಿಲಿಯಮ್ಸನ್ 59 ರನ್ ಗಳಿಸಿ ನ್ಯೂಜಿಲೆಂಡ್ ನಿಗದಿತ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 163 ರನ್ ಗಳಿಸಲು ನೆರವಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.