ಮೋದಿ ಸರ್ಕಾರ ತರಲು ಹೊರಟಿರುವ ಹೊಸ ಯೋಜನೆಯ ಪ್ರಕಾರ, ದೇಶದ ಯಾವುದೇ ಪಡಿತರ ಚೀಟಿದಾರರೂ ಸಹ ಎಂತಹದ್ದೇ ಪರಿಸ್ಥಿತಿಯಲ್ಲಿ ಕಡಿಮೆ ಪಡಿತರವನ್ನು ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಆನ್ ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್ ) ಸಾಧನಗಳನ್ನು ಕಡ್ಡಾಯಗೊಳಿಸಲು ಮುಂದಾಗಿದೆ.
Ration Card Update: ಪಡಿತರ ಚೀಟಿ ಫಲಾನುಭವಿಗಳಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಉಚಿತ ಪಡಿತರ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದರೆ, ಇದೀಗ ಸರಕಾರ ನಿಮಗಾಗಿ ಮತ್ತೊಂದು ವಿಶೇಷ ಯೋಜನೆಯನ್ನು ರೂಪಿಸುತ್ತಿದ್ದು, ಇದರ ಅಡಿಯಲ್ಲಿ ಉಚಿತ ಗೋಧಿ, ಅಕ್ಕಿ ಹೊರತುಪಡಿಸಿ ಇತರೆ ಸರಕುಗಳನ್ನು ಕೂಡ ಉಚಿತವಾಗಿ ನೀಡಲಾಗುವುದು ಎನ್ನಲಾಗಿದೆ.
Ration Card Update: ಪ್ರತಿಯೊಂದು ಪಡಿತರ ಚೀಟಿ ಧಾರಕರಿಗೆ ಫೆಬ್ರುವರಿಯಲ್ಲಿ ಎರಡು ಬಾರಿ ಉಚಿತ ಪಡಿತರ ಸಿಗಲಿದೆ. ಈ ಬಾರಿ ಮಾರ್ಚ್ 8 ರಂದು ಹೋಳಿ ಹಬ್ಬ ಆಚರಿಸಲಾಗುತ್ತಿದ್ದು, ಹೋಳಿ ಹಬ್ಬಕ್ಕೂ ಮುನ್ನ ಸರ್ಕಾರದ ವತಿಯಿಂದ ಎರಡು ಬಾರಿ ಪಡಿತರ ಸಿಗಲಿದೆ.
Free Ration Under NFSA: ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ಸ್ಥಗಿತಗೊಳಿಸಿದ ನಂತರ NFSA ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲು ಮೋದಿ ಸರ್ಕಾರ ನಿರ್ಧರಿಸಿದೆ.
NFSA ಅಡಿಯಲ್ಲಿ ಬಡವರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ನೀಡಲಾಗುವುದು ಎಂದು ಸಂಪುಟ ಸಭೆಯ ನಂತರ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಹೇಳಿದರು. ಆದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಗೆ ಗಡುವನ್ನು ವಿಸ್ತರಿಸಲು ಸರ್ಕಾರ ನಿರಾಕರಿಸಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಲಾಭ ಪಡೆದ 70 ಲಕ್ಷ ಕಾರ್ಡ್ದಾರರನ್ನು ಸರ್ಕಾರ ಬ್ಲಾಕ್ ಲಿಸ್ಟ್ ಗೆ ಸೇರಿಸಿದೆ. ಈ ಡೇಟಾವನ್ನು ಸರ್ಕಾರವು ಸ್ಥಳ ಪರಿಶೀಲನೆಗಾಗಿ ರಾಜ್ಯಗಳಿಗೆ ಕಳುಹಿಸಿದೆ.
Ration Card Latest News: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ ಇದೆ. ಕೇಂದ್ರ ಸರ್ಕಾರ 70 ಲಕ್ಷ ಪಡಿತರ ಚೀಟಿದಾರರನ್ನು ಶಂಕಿತರ ಪಟ್ಟಿಗೆ ಸೇರಿಸಿದೆ. ಇವುಗಳಲ್ಲಿ ಶೇ 60ರಿಂದ 70ರಷ್ಟು ಕಾರ್ಡ್ಗಳನ್ನು ರದ್ದುಗೊಳಿಸಬಹುದು ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.