NIA raids in Dakshina Kannada: ದಕ್ಷಿಣ ಭಾರತದ ನಿಷೇಧಿತ ಪಿಎಫ್ಐ (Popular Front of India) ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇದಿಷ್ಟೇ ಅಲ್ಲದೆ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಕೂಡ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
NIA RAID : 2022 ರ ಕೊಯಮತ್ತೂರು ಕಾರ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ತಮಿಳುನಾಡು, ಮತ್ತು ಕೇರಳದ ಸುಮಾರು 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ಐಎ ದಾಳಿ ನಡೆಸಿದೆ.
NIA Raid: ದೇಶಾದ್ಯಂತ ಇರುವ ಪಿಎಫ್ಐ ಕಛೇರಿಗಳ ಮೇಲೆ ನಡೆಸಿದ ದಾಳಿಯ ನಂತರ ಎನ್ಐಎ ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಲಷ್ಕರ್ ಮತ್ತು ಐಸಿಸ್ ನಂತಹ ಭಯೋತ್ಪಾದಕ ಸಂಘಟನೆಗಳಿಗೆ ಮುಸ್ಲಿಂ ಯುವಕರನ್ನು ಸೇರಿಸಿ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿಸಲು ಪಿಎಫ್ಐ ಸಂಚು ನಡೆಸುತ್ತಿದೆ ಎಂದು ಎನ್ಐಎ ಹೇಳಿದೆ.
ರಾಜ್ಯದ 10 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ NIA. 8 PFI ನಾಯಕರು ಹಾಗೂ 2 ರಾಜ್ಯ ಕಚೇರಿಯಲ್ಲಿ NIA ಶೋಧ. ಭಯೋತ್ಪಾದನಾ ಕೃತ್ಯಕ್ಕೆ ಕುಮ್ಮಕ್ಕು ಆರೋಪದ ಮೇಲೆ ದಾಳಿ & ಶೋಧ. PFIಯ 8 ರಾಜ್ಯ ಸಮಿತಿ ಸದಸ್ಯರ ಮನೆ ಮೇಲೆ ದಾಳಿ ನಡೆಸಿರುವ NIA.
NIA Raid: ಈ ಕುರಿತು ಮಾಹಿತಿ ನೀಡಿರುವ ಎನ್ಐಎ ವಕ್ತಾರರೊಬ್ಬರು, ತೆಲಂಗಾಣದಲ್ಲಿರುವ 38 ಸ್ಥಳಗಳಲ್ಲಿ ಹಾಗೂ ಆಂಧ್ರಪ್ರದೇಶದ ಎರಡು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಕಾರ್ಯಾಚರಣೆಯ ವೇಳೆ, ಡಿಜಿಟಲ್ ಉಪಕರಣಗಳು, ದಾಖಲೆಗಳು, ಎರಡು ಕಠಾರಿಗಳು ಮತ್ತು 8.31 ಲಕ್ಷ ರೂಪಾಯಿ ಮೌಲ್ಯದ ನಗದು ಸೇರಿದಂತೆ ಇತರ ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ಎನ್ಐಎ ದಾಳಿ ಮಾಡಿದ್ದು ಓರ್ವ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ಐಸಿಸ್ ಸಂಘಟನೆ ಜೊತೆ ನಂಟು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ತುಮಕೂರಿನ ಹೆಚ್ಎಂಎಸ್ ಯುನಾನಿ ಕಾಲೇಜ್ ಮೇಲೆ ದಾಳಿ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ಓರ್ವ ಮೆಡಿಕಲ್ ವಿದ್ಯಾರ್ಥಿಯನ್ನು ಎನ್ಐಎ ವಶಕ್ಕೆ ಪಡೆಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.