ದೇಶದಲ್ಲಿ ಕೊರೋನಾವೈರಸ್ ಹಿನ್ನೆಲೆಯಲ್ಲಿ ಎನ್ಪಿಆರ್ ಮತ್ತು ಜನಗಣತಿ 2021 ರ ದತ್ತಾಂಶ ಸಂಗ್ರಹಣೆಯನ್ನು ನವೀಕರಿಸುವ ಕಾರ್ಯವನ್ನು ಗೃಹ ಸಚಿವಾಲಯ ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ.
ಇಂದು ದೆಹಲಿ ವಿಧಾನಸಭೆ ಎನ್ಪಿಆರ್ ಮತ್ತು ಎನ್ಆರ್ಸಿವಿರುದ್ಧ ನಿರ್ಣಯವನ್ನು ಅಂಗೀಕರಿಸಿದ್ದು, 70 ಜನ ಶಾಸಕರಲ್ಲಿ 61 ಮಂದಿ ತಮ್ಮ ಜನನ ಪ್ರಮಾಣಪತ್ರಗಳನ್ನು ಇನ್ನೂ ಹೊಂದಿದ್ದೀರಾ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಳಿದಾಗ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ದೆಹಲಿಯ ಒಂದು ಭಾಗದಲ್ಲಿ 24 ಗಂಟೆಗಳಿಗೂ ಹೆಚ್ಚು ಕಾಲ ಪೌರತ್ವ ತಿದ್ದುಪಡಿ ಕಾನೂನಿನ ಪ್ರತಿಭಟನೆಯ ವಿಚಾರವಾಗಿ ಪರ-ವಿರೋಧದ ಗುಂಪುಗಳ ನಡುವಿನ ಘರ್ಷಣೆಯಿಂದಾಗಿ ಇದರಲ್ಲಿ ಪೊಲೀಸ್ ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಯ ಆಧಾರವಾಗಿದೆ ಮತ್ತು "ಧರ್ಮ" ಪೌರತ್ವದ ಆಧಾರವಾಗಿರಲು ಸಾಧ್ಯವಿಲ್ಲ ಎನ್ನುವ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪೌರತ್ವ ತಿದ್ದುಪಡಿ ನಿಯಮಗಳು - 2003 ಕುರಿತಾಗಿ ಅವರಿಗೆ ಹೆಚ್ಚಿನ ಮಾಹಿತಿ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಹೇಳಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾದರು ಮತ್ತು ಅಸ್ಸಾಂನಲ್ಲಿ ಮಾತ್ರ ಎನ್ಆರ್ಸಿ ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಒಂದು ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ಮುಸ್ಲಿಂಮರಿಗೆ ಯಾವುದೇ ರೀತಿಯ ತೊಂದರೆ ಉಂಟು ಮಾಡಿದರೆ, ಅವರನ್ನು ಬೆಂಬಲಕ್ಕೆ ನಿಲ್ಲುವ ಮೊದಲ ವ್ಯಕ್ತಿ ನಾನಾಗಲಿದ್ದೇನೆ ಎಂದು ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ಅಷ್ಟೇ ಅಲ್ಲ NPR ಕೂಡ ದೇಶದ ಹಿತದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ.
SC ಮತ್ತು ST ಪಂಗಡಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಮುಂದಿನ 10 ವರ್ಷಗಳಿಗೆ ಹೆಚ್ಚಿಸಲು ಈ ವಿಶೇಷ ಅಧಿವೇಶನ ಕರೆಯಲಾಗಿದೆ. ಬಿಹಾರ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ NRCಗೆ ಸಂಬಂಧಿಸಿದಂತೆ ಗಂಭೀರ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.