Odisha Train tragedy: ರೈಲು ದುರಂತದ ಬಗ್ಗೆ ಸಿಬಿಐನಿಂದಲೂ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆಯಿರುವ ಹಿನ್ನೆಲೆ ಸಿಬಿಐ ತನಿಖೆ ಕೈಗೊಂಡಿದೆ. ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಮಾನವ ತಪ್ಪು ಕಾರಣವೆಂದು ರೈಲ್ವೆ ಸುರಕ್ಷತಾ ಆಯುಕ್ತರು(CRS) ತಿಳಿಸಿದ್ದಾರೆ.
ಬೆಂಗಳೂರಿನಿಂದ ಹೌರಾಗೆ ಹೊರಡುವ 2 ರೈಲುಗಳ ಸಂಚಾರ ರದ್ದು ಬೈಯಪ್ಪನಹಳ್ಳಿಯ SMVT ರೈಲು ನಿಲ್ದಾಣದಿಂದ ಹೌರಾಗೆ ತೆರಳುವ ರೈಲುಗಳು 12246 ಹೌರಾ ದುರಂತೋ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು 12864 ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳಿಂದ ಮಾಹಿತಿ
ಒಡಿಶಾ ರೈಲು ದುರಂತದ ಕುರಿತು ಕಾಂಗ್ರೆಸ್ ಭಾನುವಾರದಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೊಣೆಗಾರಿಕೆಯನ್ನು ಸರಿಪಡಿಸಬೇಕು ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ನಮ್ಮ ಈ ಕಾರ್ಯಕ್ಕೆ ಜೊತೆಯಾದ ಜೆಎಂಸಿ, ಕೆ2ಕೆ, ಡಿಮಾರ್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಮರ್ಸಿ ಫೌಂಡೇಷನ್, ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಮತ್ತು ತಂಡದವರಿಗೆ ಧನ್ಯವಾದಗಳು.ಇಂಥ ಸಂಕಷ್ಟದ ಸಮಯದಲ್ಲಿ ತಾವು ತೋರಿದ ಮಾನವೀಯ ಕಾಳಜಿ ಶ್ಲಾಘನೀಯವಾ
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 300 ಜನರು ಗಾಯಗೊಂಡಿದ್ದಾರೆ ಮತ್ತು ಅನೇಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ರಾಜ್ಯದ ಬಾಲಸೋರ್ ಜಿಲ್ಲೆಯಲ್ಲಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ ಹಲವಾರು ಕೋಚ್ಗಳು ಹಳಿತಪ್ಪಿ ಪಕ್ಕದ ಹಳಿಯಲ್ಲಿ ಚಲಿಸುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಈ ದುರ್ಘಟನೆ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.