ಪಿಎಫ್ಐ ಕಚೇರಿಗೆ ಬೀಗ ಜಡಿಯಲು ಆದೇಶದ ಹಿನ್ನೆಲೆಯಲ್ಲಿ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಛೇರಿ ಪಿಎಫ್ಐ ಕಛೇರಿ ಬಳಿ ಪೊಲೀಸ್ ಭದ್ರತೆಯಲ್ಲಿ ಸೀಜ್ ಮಾಡಲಾಯಿತು. ಇದೇ ವೇಳೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪರಿಶೀಲನೆ ನಡೆಸಿದ್ರು.
ರಾಜ್ಯದ ಮೂಲೆ ಮೂಲೆಯಲ್ಲೂ PFI, SDPI ಮುಖಂಡರಿಗೆ ಖಾಕಿ ಮಾಸ್ಟರ್ ಸ್ಟ್ರೋಕ್ ನೀಡಿದೆ. ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿರುವ ಪಿಎಫ್ಐ ಸದಸ್ಯರ ನಿವಾಸದ ಮೇಲೆ ದಾಳಿ ಮಾಡಿ ಪ್ರಮುಖರನ್ನ ವಶಕ್ಕೆ ಪಡೆದು ಖಾಕಿ ಡ್ರಿಲ್ ನಡೆಸುತ್ತಿದೆ.
ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಪಿಎಫ್ಐ, ಎಸ್ಡಿಪಿಐ ಸಂಘಟನೆ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಪೊಲೀಸರು ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಚಾಮರಾಜನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಮುಖಂಡರನ್ನು ಬಂಧಿಸಿ, ತಹಸಿಲ್ದಾರ್ ಮುಂದೆ ಹಾಜರು ಪಡಿಸಿದ್ದಾರೆ.
ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಿಎಫ್ಐ ನಾಯಕ ನಿವಾಸದ ಮೇಲೆ ನಡೆಸಲಾಗಿದ್ದು, ಮಂಗಳೂರು, ಬಾಗಲಕೋಟೆ, ರಾಮನಗರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಚಾಮರಾಜನಗರದಲ್ಲೂ ಕಾರ್ಯಾಚರಣೆ ನಡೆಸಲಾಗಿದೆ.
Raid on PFI bases in 8 states: ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನೆಲೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಮೀರತ್ ಮತ್ತು ಬುಲಂದ್ಶಹರ್ನಲ್ಲಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.