ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದರು.
ಹುಬ್ಬಳ್ಳಿಯ ಸಿದ್ಧಾರೂಢ ಮಠ, ಮೂರು ಸಾವಿರ ಮಠದ ಪುಣ್ಯ ಭೂಮಿಗೆ ನಮಸ್ಕಾರ. ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನ ಪುಣ್ಯ ನಾಡಿಗೆ ನನ್ನ ನಮಸ್ಕಾರಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಭಾಷಣ ಮಾಡುವ ಮೂಲಕ ಹುಬ್ಬಳ್ಳಿಯ ಜನತೆಗೆ ಅಭಿನಂದನೆ ಸಲ್ಲಿಸಿದರು.
ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜರುಗುವುದರಿಂದ ಮತ್ತು ಮಾನ್ಯ ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿರುವುದರಿಂದ ಜನದಟ್ಟಣೆ ಹೆಚ್ಚಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.