ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸ್ ಫೈರಿಂಗ್
ಇಬ್ಬರು ಅಂತಾರಾಜ್ಯ ದರೋಡೆಕೋರರ ಕಾಲಿಗೆ ಗುಂಡೇಟು
ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಆರೋಪಿಗಳು
ಭರತ್ ಹಾಗೂ ಫಾರೂಕ್ ಕಾಲಿಗೆ ಗುಂಡು ಹೊಡೆದ ಪೊಲೀಸರು
ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯ
ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
Hubballi Police Firing: ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚನ್ನಮ್ಮ ವೃತ್ತದ ಬಳಿ ಚೈನು, ಉಂಗುರು, ಫೋನ್ ಹಾಗೂ ಹಣ ದರೋಡೆ ಪ್ರಕರಣ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪನಗರ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಆರೋಪಿ ಅರುಣ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ.
ಯುವತಿಯ ಮೇಲೆ ಆ್ಯಸಿಡ್ ಎರಚಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇದೀಗ ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆತನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರು ನಾಗನನ್ನು ಬಂಧಿಸಿ ಕರೆತರುವಾಗ ಈ ಘಟನೆ ನಡೆದಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಮಾರ್ಚ್ ನಡೆಸಲು ಮುಂದಾಗಿದ್ದಾರೆ. ನೋಡುತ್ತಲೇ ಈ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿತ್ತು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ವಿಶ್ವವಿದ್ಯಾಲಯದ ಆವರಣದಲ್ಲಿ ವಾಹನಗಳ ಮೇಲೆ ಹಲ್ಲೆ ನಡೆಸಿ, ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.