ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ.
Prajwal Revanna Case: ಇನ್ನೂ ಮುಂದುವರೆದು ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ.ಸತ್ಯಮೇವ ಜಯತೇ ಎಂದು ಅವರು ಅಭಯ ಹಸ್ತ ನೀಡಿದ್ದಾರೆ.
CM Siddaramaiah: ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಮತ್ತೆ ಬದಲಾವಣೆ ಮಾಡಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆಗೆ ಕಾರಣರಾಗಿ ಎಂದು ಅವರು ಮನವಿ ಮಾಡಿದರು.
D.K. Shivakumar: “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.