2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪರ್ಧಿಸುತ್ತಾರಾ ಎಂಬ ಜೆಡಿಎಸ್ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿರುವ ದೇವೇಗೌಡರ ಪುತ್ರ ಎಚ್.ಡಿ. ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ಸಿಗರು ಕಾಂಗ್ರೆಸ್ ಅಲೆಯಲ್ಲಿ ಗೆದ್ದಿಲ್ಲ, ಬಿಜೆಪಿಯ ತಪ್ಪಿನಿಂದ ಗೆದ್ದಿದ್ದಾರೆ ಅಷ್ಟೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಮಾತನಾಡುತ್ತಿದ್ದರು.
ಯಾವ ಕೇಸ್ ಏನೂ ಆಗಿಲ್ಲ. ಏನು ಅವ್ಯವಹಾರವನ್ನೂ ಮಾಡಿಲ್ಲ. ಕೋರ್ಟ್ನಲ್ಲಿ ಕೇಸ್ ನಡೀತಿದ್ದು ಈಗ ಚರ್ಚೆ ಮಾಡೋದ್ರಲ್ಲ ಅರ್ಥವಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ಬಗ್ಗೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ, ಯಾರೋ ಒಬ್ಬರು ನಾವು ಗೆದ್ದೆವು ಅಂತಾ ಸುಮ್ನೆ ಹೇಳೋದು ಬೇಡ ಎಂದಿದ್ದಾರೆ.
ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ ಎಂದು ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.
ಕಾರ್ಯಕರ್ತರು ಹಾಗೂ ಮುಖಂಡರಿಂದ ಪಡೆದ ಸಮೀಕ್ಷೆ ವರದಿ ಪ್ರಕಾರ ಹಾಸನದಲ್ಲಿ 2.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ನ ಕುಟುಂಬದಲ್ಲಿ ಈಗ ದೇವೇಗೌಡ ಮೊಮ್ಮಕ್ಕಳ ನಡುವೆ ಚುನಾವಣೆಗೆ ಸ್ಪರ್ಧಿಸಲು ಸ್ಪರ್ಧೆ ನಡೆದಿದೆ.ಇದಕ್ಕೆ ಪೂರಕ ಎನ್ನುವಂತೆ ಈಗ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿಕೆ ಇದಕ್ಕೆ ಪುಷ್ಟಿ ನೀಡಿದೆ.ಆ ಮೂಲಕ ಈ ಬಾರಿ ಮಂಡ್ಯ ಮತ್ತು ಹಾಸನ್ ಕ್ಷೇತ್ರಗಳಲ್ಲಿ ಇಬ್ಬರು ಸ್ಪರ್ಧಿಸಿದರೆ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.