ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿಬಂದ ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್-2 ಸಿನಿಮಾ ಜಗತ್ತಿನಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ.
KGF 2 Collection: ಯಶ್ ಅಭಿನಯದ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಸದ್ಯ ಬಾಕ್ಸ್ ಆಫೀಸ್ನಲ್ಲಿ ತೂಫಾನ್ ಎಬ್ಬಿಸಿದೆ. ಚಿತ್ರವು ಬಾಕ್ಸ್ ಆಫೀಸ್ನಲ್ಲಿ 7 ದಿನಗಳಲ್ಲಿ 723.15 ಕೋಟಿ ರೂಪಾಯಿಗಳನ್ನು ಕಲೆ ಹಾಕಿದೆ.
ಬಾಲಿವುಡ್ ಅಂಗಳದಲ್ಲಿ ಈ ಚಿತ್ರ ಕಮಾಲ್ ಮಾಡುತ್ತಿದೆ. ಇದೀಗ ಪ್ರಶಾಂತ್ ನೀಲ್ ಅವರ ವಿಚಾರ ಸಖತ್ ವೈರಲ್ ಆಗುತ್ತಿದೆ. ಪುನೀತ್ ರಾಜ್ಕುಮಾರ್ ಹಾಗೂ ಪ್ರಶಾಂತ್ ನೀಲ್ ಒಟ್ಟಾಗಿ ಒಂದು ಸಿನಿಮಾ ಮಾಡಬೇಕಿತ್ತು. ಇದನ್ನು ಪ್ರಶಾಂತ್ ನೀಲ್ ಸಹ ಖಚಿತಪಡಿಸಿದ್ದಾರೆ.
KGF 2 Records: ಕನ್ನಡ ಸಿನಿಮಾವೊಂದು ವಿಶ್ವಮಟ್ಟದಲ್ಲಿ ಈ ರೀತಿ ಹವಾ ಮಾಡುತ್ತಿರುವುದು ಅನೇಕ ಸಿನಿಮಾ ರಂಗದ ನಿರ್ಮಾಪಕರಿಗೆ ಹೊಸದೊಂದು ಮಾರ್ಗ ಕಾಣಿಸಿದಂತಾಗಿದೆ. ಈ ಸಿನಿಮಾ ಮುಟ್ಟಿದ್ದೆಲ್ಲ ರೆಕಾರ್ಡ್ ಆಗುತ್ತಿದೆ. ಐದು ಭಾಷೆಗಳಲ್ಲಿ ರಿಲೀಸ್ ಆದ ಈ ಸಿನಿಮಾ ಕೇವಲ ನಾಲ್ಕು ದಿನಗಳಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 29 ದಾಖಲೆಗಳನ್ನು ಬರೆದಿದೆ.
ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಯಶ್ ಅಭಿನಯದ ಕೆಜಿಎಫ್ 2 ಚಿತ್ರವು ಈಗ ಯಶಸ್ಸಿನ ನಾಗಾಲೋಟದ ಮೂಲಕ ಮುನ್ನುಗ್ಗುತ್ತಿರುವ ಬೆನ್ನಲ್ಲೇ ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಕೆಜಿಎಫ್ 2 ಚಿತ್ರದ ಟಿಕೆಟ್ ಗಳನ್ನು ಉಚಿತವಾಗಿ ನೀಡಲು ಮುಂದಾಗಿದೆ.
ಕೆಜಿಎಫ್ 2 ಚಿತ್ರ ಈಗಾಗಲೇ ಬಿಡುಗಡೆ ಆಗಿ ವಿಶ್ವದ ಮೂಲೆ ಮೂಲೆಯಲ್ಲೂ ಅಬ್ಬರಿಸುತ್ತಿದೆ. ಅಲ್ಲದೇ ಬಾಕ್ಸ್ ಆಫೀಸ್ ನಲ್ಲಿ ಎಲ್ಲ ದಾಖಲೆಗಳನ್ನು ಧೂಳಿಪಟ ಮಾಡಿದೆ. ಕೆಜಿಎಫ್ ಸಿನಿಮಾದ ಯಶಸ್ಸಿಗೆ ತಾರಾಗಣವೂ ಪ್ರಮುಖ ಪಾತ್ರ ವಹಿಸಿದೆ. ಪ್ರಶಾಂತ್ ನೀಲ್ ಅವರ ನಿರ್ದೇಶನಕ್ಕೆ ಪ್ರೇಕ್ಷಕ ಪ್ರಭು ಫುಲ್ ಫಿದಾ ಆಗಿದ್ದಾರೆ.
KGF Chapter 2: ನರಾಚಿ ಲೋಕದಲ್ಲಿ ಗರುಡನ ಹತ್ಯೆ ಬಳಿಕ ಏನಾಯ್ತು? ಎಂಬ ಕುತೂಹಲಕ್ಕೆ ಶೀಘ್ರದಲ್ಲೇ ಉತ್ತರ ಸಿಗಲಿದೆ. ಕೇವಲ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿನಿ ಪ್ರಿಯರ ಕಾತುರ ಹೆಚ್ಚಿಸಿದ್ದ ಚಿತ್ರತಂಡ ಮಾರ್ಚ್ನಲ್ಲಿ ತೂಫಾನ್ ಲಿರಿಕಲ್ ಸಾಂಗ್ ಮತ್ತು ಟ್ರೇಲರ್ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.