ಅದು ಕರಾವಳಿಯಲ್ಲಿ ಕಿಚ್ಚು ಹಚ್ಚಿದಂತಹ ಕೊಲೆ ಪ್ರಕರಣ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರುನನ್ನ ಭೀಕರವಾಗಿ ಹತ್ಯೆಗೈಯಲಾಗಿತ್ತು. ಕೊಲೆ ನಡೆದು ಎಂಟು ತಿಂಗಳಾದ್ರು,ಅದರ ಸಂಚುಕೋರ ಮಾತ್ರ ಇನ್ನೂ ಸಿಕ್ಕಿರಲಿಲ್ಲ. ಅದ್ರೆ ನಿನ್ನೆ ನಡೆದ ಮಿಂಚಿನ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಹಾಗಾದ್ರೆ ಆ ಆರೋಪಿ ಯಾರು? ಎನ್ಐಎ ಮಿಂಚಿನ ಕಾರ್ಯಾಚರಣೆ ಹೇಗಿತ್ತು.. ಗೊತ್ತಾ..? ಮುಂದೆ ಓದಿ..
ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ‘ಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. #ಸರ್ವ_ಜನಾಂಗದ_ಶಾಂತಿಯ_ತೋಟ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ‘ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ?’ ಎಂದು ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.