ಅದು ಕರಾವಳಿಯಲ್ಲಿ ಕಿಚ್ಚು ಹಚ್ಚಿದಂತಹ ಕೊಲೆ ಪ್ರಕರಣ. ಕೊಲೆ ನಡೆದು ಎಂಟು ತಿಂಗಳಾದ್ರು, ಅದರ ಸಂಚುಕೋರ ಮಾತ್ರ ಇನ್ನೂ ಸಿಕ್ಕಿರಲಿಲ್ಲ. ಅದ್ರೆ NIA ಮಿಂಚಿನ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲೇ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
Praveen Nettaru murder case : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಿನ್ನೆ ರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಮಾರುತಿ ಲೇಔಟ್ ನಲ್ಲಿ ವಾಸವಾಗಿದ್ದ ತೌಫಿಲ್ ನ ಹೆಡೆಮುರಿ ಕಟ್ಟಲಾಗಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್, ಬಶೀರ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಆರು ಜಿಲ್ಲೆಯ ಎಸ್ಪಿ, ಎನ್ ಐಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಿದರು. ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಸಭೆಯ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದರು.
ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅಬೀದ್ (22), ನೌಫಲ್ (28) ಬಂಧಿತ ಆರೋಪಿಗಳು. ಅಬೀದ್ ನಾವೂರು ನಿವಾಸಿಯಾಗಿದ್ದು, ನೌಫಲ್ ಬೆಳ್ಳಾರೆ ನಿವಾಸಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಆರೋಪಿಗಳ ಬಂಧನವಾದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.