ರಾಷ್ಟ್ರಪತಿ ದ್ರೌಪತಿ ಮುರ್ಮು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ್ದ ಭಾಷಣದ ವಂದನಾ ನಿರ್ಣಯದ ಮೇಲೆ ನಿನ್ನೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದರು. ಇಂದು ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ.
ಲೋಕಸಭೆ ಚುನಾವಣೆಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮುಂಗಡ ಪತ್ರದ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ.ಬಜೆಟ್ ಅಧಿವೇಶನಕ್ಕೆ ಸಂಸತ್ತು ಸಜ್ಜಾಗಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಉಭಯ ಸದನಗಳನ್ನು ಉದ್ದೇಶಿಸಿ, ಮಾತನಾಡಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆಗೈದ ಭಾರತದ ಅಥ್ಲೀಟ್ಗಳಿಗೆ ಇಂದು ರಾಷ್ಟೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ಯಾರಾ ಆರ್ಚರಿಪಟು ಶೀತಲ್ ದೇವಿ ಮತ್ತು ಕ್ರಿಕೆಟಿಗ ಮೊಹಮ್ಮದ್ ಶಮಿ ಸೇರಿದಂತೆ 26 ಅಥ್ಲೀಟ್ಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಯಿತು.
ಸಾಂಸ್ಕೃತಿಕ ನಗರಿ ಮೈಸೂರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ.
ವಿದ್ಯಾಕಾಶಿ ಎಂದು ಪ್ರಖ್ಯಾತಿ ಹೊಂದಿರುದ ಧಾರವಾಡಕ್ಕೆ ಇದೀಗ ಮತ್ತೊಂದು ಮುಕುಟು ಮುಡಿಗೇರಿಸಿಕೊಂಡಿದೆ. ತಾಲೂಕಿನ ತಡಸಿನಕೊಪ್ಪ ಗ್ರಾಮದ ಹತ್ತಿರ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವ್ರು ಲೋಕಾರ್ಪಣೆ ಮಾಡಿದ್ರು..
ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ರಾಷ್ಟ್ರಪತಿ ಮುರ್ಮು ದಸರಾ ಉತ್ಸವಕ್ಕೆ ಚಾಲನೆ ನೀಡಿಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ನಾಳೆ ರಾಷ್ಟ್ರಪತಿ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಸಚಿವ ಎಸ್.ಟಿ ಸೋಮಶೇಖರ್ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ್ರು.
ದೇಶದ ಹದಿನೈದನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಕಲಾವಿದೆಯೊಬ್ಬರು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಹಾಡಿರುವ ಯಕ್ಷಗಾನ ಧಾಟಿಯ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.