ರೆಬಲ್ ಸ್ಟಾರ್ ಅಂಬರೀಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ದೈಹಿಕವಾಗಿ ದೂರವಾಗಿದ್ದರೂ ಸಹ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಅವರು ಸದಾ ಅಮರ. ಇದೀಗ ಪುನೀತ್ ರಾಜ್ಕುಮಾರ್ ಮತ್ತು ಅಂಬರೀಷ್ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಚಿಕ್ಕೋಡಿಯ PWD ಕಚೇರಿಯ ಆವರಣದ ಮುಂದೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಅನಾವರಣ ಮಾಡಲಾಗಿದೆ. ಸಂಸದ ಅಣ್ಣಾಸಾಹೇಬ್ ಜೊಲ್ಲೆ ಜಾಗೂ ಮಹಾಂತೇಶ ಕವಟಗಿಮಠ ಪ್ರತಿಮೆ ಅನಾವರಣಗೊಳಿಸಿದ್ರು.
ಚಿಕ್ಕೋಡಿಯ PWD ಕಚೇರಿಯ ಆವರಣದ ಮುಂದೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಅನಾವರಣ ಮಾಡಲಾಗಿದೆ. ಸಂಸದ ಅಣ್ಣಾಸಾಹೇಬ್ ಜೊಲ್ಲೆ ಜಾಗೂ ಮಹಾಂತೇಶ ಕವಟಗಿಮಠ ಪ್ರತಿಮೆ ಅನಾವರಣಗೊಳಿಸಿದ್ರು.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಮ್ಮನ್ನ ಅಗಲಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ. ಸಿನಿಮಾ ಹಾಗೂ ಸಮಾಜ ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಾ ವೀರಕನ್ನಡಿಗ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಆದರೆ ಹೃದಯಾಘಾತಕ್ಕೆ ಒಳಗಾಗಿ ಕಳೆದ ವರ್ಷ ಅಪ್ಪು ಕೊನೆಯುಸಿರೆಳೆದಿದ್ದರು. ಇಂದು ಅವರ ಪುಣ್ಯ ಸ್ಮರಣೆ. ಪುನೀತ್ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳು ಅವರ ಮೊದಲ ಪುಣ್ಯತಿಥಿಯನ್ನು ಆಚರಿಸಲು ವಿನೂತನ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.
ಪುನೀತ್ ರಾಜ್ ಕುಮಾರ್ , ಇದು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುವ ಹೆಸರು. ನಟನೆ , ವ್ಯಕ್ತಿತ್ವ ಮತ್ತು ನಿಸ್ವಾರ್ಥ ಸಮಾಜಮುಖಿ ಸೇವೆಗಳಿಂದ ಜನಮಾನಸದಲ್ಲಿ ಅಚ್ಚಳಿಯದೆ ನೆಲೆಸಿರುವ ಈ ಹಸನ್ಮುಖಿ ನಮ್ಮಲ್ಲೆರನ್ನು ಅಗಲಿ ಇಂದಿಗೆ ಒಂದು ವರ್ಷವೇ ಆಗಿದೆ. ಇಡೀ ಭಾರತೀಯ ಚಿತ್ರರಂಗಕ್ಕೆ ಮರೆಯಲಾಗದಂತ ದುಃಖವಾಗಿ ಪರಿಣಮಿಸಿ ಕಣ್ಣೀರಾಗಿಸಿರುವ ಈ ದೊಡ್ಮನೆ ಕಂದ ಇಂದಿಗೂ ಎಲ್ಲರ ಮನಸಿನಲ್ಲಿ ಮುದ್ದಿನ ಮಗುವಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಹಾಗೂ ಡಾ.ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಪುನೀತ್ ರಾಜಕುಮಾರ್ ಅವರ 7.4ಅಡಿ ಎತ್ತರದ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕಾಗಿಯೇ ಬೆಂಗಳೂರಿನಿಂದ ಆಗಮಿಸಿದ್ದ ಪುನೀತ್ ರಾಜಕುಮಾರ್ ಸಹೋದರ ರಾಘವೇಂದ್ರ ರಾಜಕುಮಾರ್ ಅವರು ಪುನೀತ್ ಅವರ ಕಂಚಿನ ಪ್ರತಿಮೆಯನ್ನು ರಿಮೋಟ್ ಮೂಲಕ ಅನಾವರಣಗೊಳಿಸಿದ್ರು.
ಹೊಸಪೇಟೆ ನಗರದ ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ದೊಡ್ಮನೆ ಹುಡ್ಗನ 7.04 ಅಡಿ ಎತ್ತರದ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಪುನೀತ್ ರಾಜ್ಕುಮಾರ್ ಪುತ್ಥಳಿಯನ್ನಆಂಧ್ರಪ್ರದೇಶದ ಗುಂಟೂರಿನ ತೆನಾಲಿಯಿಂದ ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.