ಮುಂಬರುವ ವಿಧಾನಸಭೆ ಚುನಾವಣೆಗೆ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ ಕೆಲವೇ ದಿನಗಳ ನಂತರ, ಪಕ್ಷದ ಸಂಸದ ರವನೀತ್ ಸಿಂಗ್ ಬಿಟ್ಟು ಶುಕ್ರವಾರ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ "ಸೂಪರ್ ಸಿಎಂ" ಹುದ್ದೆ ಸಿಗಲಿದೆ ಎಂದು ಹೇಳಿದ್ದಾರೆ.
ಪಂಜಾಬ್ ಅಸೆಂಬ್ಲಿ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ಈಗ ಸಿಧು ಸಹೋದರಿ ಸುಮನ್ ತೂರ್ ನವಜೋತ್ ಸಿಂಗ್ ಸಿಧು ಅವರನ್ನು ಕ್ರೂರ ವ್ಯಕ್ತಿ ಎಂದು ಕರೆದಿದ್ದಾರೆ.ಅವರು ತಮ್ಮ ತಂದೆಯ ಮರಣದ ನಂತರ ತಮ್ಮ ವೃದ್ಧ ತಾಯಿಯನ್ನು ತೊರೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರದಂದು (ಅಕ್ಟೋಬರ್ 15, 2021) ನವದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ ಪಂಜಾಬ್ ಕಾಂಗ್ರೆಸ್ ಮುಖ್ಯ ಸ್ಥಾನಕ್ಕೆ ರಾಜೀನಾಮೆ ಹಿಂತೆಗೆದುಕೊಂಡಿದ್ದಾರೆ.
ಪಂಜಾಬಿನ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರಾಗಿ ನವಜೋತ್ ಸಿಂಗ್ ಸಿಧು ಹೆಸರನ್ನು ಘೋಷಿಸಿದ ನಂತರ ಈಗ ಅವರು ತಮ್ಮ ಬಲ ಪ್ರದರ್ಶನವನ್ನು ತೋರಿಸುವ ನಿಟ್ಟಿನಲ್ಲಿ 62 ಶಾಸಕರು ಹಾಗೂ ಸಚಿವರೊಂದಿಗೆ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗಿನ ಘರ್ಷಣೆಯ ನಂತರ ಅಂತಿಮವಾಗಿ ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಅವರನ್ನು ಭಾನುವಾರ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
ರಾಜ್ಯದಲ್ಲಿ COVID-19 ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಎರಡು ವಾರಗಳವರೆಗೆ ಪಂಜಾಬ್ ಕಾಂಗ್ರೆಸ್ ಯಾವುದೇ ರಾಜಕೀಯ ಕೂಟಗಳನ್ನು ನಡೆಸುವುದಿಲ್ಲ ಎಂದು COVID-19 ಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.