ರಾಜ್ಯದಲ್ಲಿ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿ
ಮಳೆ ಹಾನಿ ಕುರಿತು ಸಿಎಂ ಸಿದ್ದರಾಮಯ್ಯ ಸಭೆ
ಇಂದು ಮಧ್ಯಾಹ್ನ 12ಕ್ಕೆ ಅಧಿಕಾರಿಗಳೊಂದಿಗೆ ಸಭೆ
ಮಳೆಹಾನಿ ಕುರಿತು ಮಾಹಿತಿ ಪಡೆಯಲಿರುವ ಸಿಎಂ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಬಿಳಗಲಿ ಗ್ರಾಮದ 20-25 ಮನೆಗಳ ಗ್ರಾಮ 2019ರ ರಣಮಳೆಗೆ ಅಕ್ಷರಶಃ ಬೆಚ್ಚಿ ಬಿದ್ದಿತ್ತು. ಧರೆ ಕುಸಿದು 3 ಮನೆಗಳು ಕೊಚ್ಚಿ ಹೋಗಿದ್ವು. ಅಂದಿನಿಂದ ಅಲ್ಲಿರೋ 17 ಮನೆಗಳಿಗೆ ಇಂದಿಗೂ ಅದೇ ಭಯ...ಆತಂಕ ಕಾಡ್ತಿತ್ತು
ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಅಂಡರ್ಪಾಸ್ಗಳು, ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ, ಜನರು ರಾತ್ರಿ ನಿದ್ದೆ ಇಲ್ಲದೆ ಪರದಾಡುವಂತಾಗಿದೆ ,, ಟ್ರಿಪ್ ಗೆ ಬಂದಿದ ಟೆಕಿ ಅಂಡರ್ ಪಾಸ್ ನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ, ಇತ್ತ ರಾಜಕಾಲುವೆಗೆ ಕೊಚ್ಚಿಹೋಗಿ ಯುವಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
ಹುಬ್ಬಳ್ಳಿಯಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದ್ದು ಅವಾಂತರ ಸೃಷ್ಟಿಸಿದೆ.. ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ಟ್ರ್ಯಾಕ್ಟರ್ ಮಳೆಯಿಂದ ಕೊಚ್ಚಿಹೋಗಿದೆ. ಮಂಟೂರ ಗ್ರಾಮ ಸಂಪೂರ್ಣ ಜವಾವೃತವಾಗಿದೆ..
ಬೆಂಗಳೂರು ಗ್ರಾಮಾಂತರದಲ್ಲಿ ಅಬ್ಬರಿಸಿದ ಮಳೆರಾಯ. ರಾತ್ರಿ ಸುರಿದ ಮಳೆಗೆ ಜಲಾವೃತಗೊಂಡ ಅಗಲಕೋಟೆ ಗ್ರಾಮ. ಧರೆಗುಳಿದ ಮನೆಗಳು, ರಾತ್ರಿ ನಿದ್ದೆಗೆಟ್ಟ ಗ್ರಾಮಸ್ಥರು. ಅಗಲಕೋಟೆ ಗ್ರಾಮದಲ್ಲಿ ಐದಾರು ಮನೆಗಳಿಗೆ ಹಾನಿ.
ಉಟ್ಟ ಬಟ್ಟೆಯಲ್ಲೇ ಊರು ಬಿಟ್ಟ ಗ್ರಾಮಸ್ಥರು ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯ ಆರ್ಭಟ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಭಾರೀ ಕಟ್ಟೆಚ್ಚರ
ಬೆಳಗಾವಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಕತ್ರಿದಡ್ಡಿ, ದಿಂಡಲಕೊಪ್ಪ, ನಿಚ್ಚಣಕಿ ಗ್ರಾಮಗಳ ಮನೆಗಳಿಗೆ ಭಾರೀ ಹಾನಿ ಉಂಟಾಗಿದೆ. ಸ್ಥಳಕ್ಕೆ ಖಾನಾಪುರ ತಾಲೂಕು ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.