ರಾಜಸ್ತಾನದ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಕಳೆದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಪ್ರಾಬಲ್ಯ ಮೆರೆದಿದೆ. 961 ವಾರ್ಡ್ಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಹಿಂದಿಕ್ಕಿದೆ. ಇನ್ನೊಂದೆಡೆಗೆ ಬಿಜೆಪಿ 737 ಸ್ಥಾನಗಳನ್ನು ಗಳಿಸಿದೆ.
ಸೋಮವಾರ ಬೆಳಿಗ್ಗೆ 7: 30 ರ ಸುಮಾರಿಗೆ ರಾಜಸ್ಥಾನದ ಶ್ರೀಡುಂಗರಪುರ ಪ್ರದೇಶದ ಬಳಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಎಷ್ಟು ಪ್ರಬಲವಾಗಿದೆಯೆಂದರೆ ಬಸ್ನ ಮುಂಭಾಗ ಟ್ರಕ್ ಒಳಗೆ ನುಗ್ಗಿದೆ.
ಮನೆಯಲ್ಲಿ ತನ್ನ ತಾಯಿ ತೀರಿಕೊಂಡಿದ್ದಾರೆ. ಹೀಗಾಗಿ ತಂದೆ ನನಗೆ ಈ ವಯಸ್ಸಿನಲ್ಲಿಯೇ ಮದುವೆಯಾಗಲು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಆ 15 ವರ್ಷದ ಬಾಲಕಿ ತನ್ನ ಚಿಕ್ಕಪ್ಪನೊಂದಿಗೆ ಸಿಎಂ ನಿವಾಸಕ್ಕೆ ತೆರಳಿ ಮನವಿ ಮಾಡಿದ್ದಾಳೆ ಎನ್ನಲಾಗಿದೆ.
ರಾಜಸ್ಥಾನದಲ್ಲಿ ಮದ್ಯ ನಿಷೇಧದ ವದಂತಿಗಳನ್ನು ತಿರಸ್ಕರಿಸಿದ ಗೆಹ್ಲೋಟ್, ಅಕ್ರಮ ಮದ್ಯವನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಮದ್ಯದ ಮೇಲೆ ಯಾವುದೇ ನಿಷೇಧ ಹೇರಲಾಗುವುದಿಲ್ಲ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಅಕ್ಟೋಬರ್ 21 ರಂದು ನಾಗೌರ್ ಜಿಲ್ಲೆಯ ಖಿನ್ವಾರ್ನಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪಕ್ಷ ರಾಷ್ಟ್ರೀಯ ಲೋಕತಂತ್ರಿಕ್ ಪಕ್ಷ (ಆರ್ಎಲ್ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಗುರುವಾರ ಹೇಳಿದ್ದಾರೆ.
ಹುಟ್ಟುಹಬ್ಬ ಆಚರಿಸಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಯೋರ್ವ ಪ್ರಾಂಶುಪಾಲರಿಗೇ ಕಪಾಳಮೋಕ್ಷ ಮಾಡಿ, ಬೆದರಿಕೆ ಹಾಕಿದ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿರುವ ದಯಾನಂದ ಕಾಲೇಜಿನಲ್ಲಿ ನಡೆದಿದೆ.
ಕಾಂಗ್ರೆಸ್ ಅನ್ನು ದಲಿತ ವಿರೋಧಿ ಪಕ್ಷ ಎಂದು ಕರೆದ ಮಾಯಾವತಿ, ಹಿರಿಯ ಪಕ್ಷವು ಹಿಂದುಳಿದವರ ಹಕ್ಕುಗಳನ್ನು ಕಾಪಾಡುವ ವಿಚಾರದಲ್ಲಿ ಗಂಭೀರವಾಗಿಲ್ಲ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಿದಾರೆ.
ರಾಜಸ್ಥಾನದ ಕೋಟಾ, ಬುಂಡಿ, ಬಾರನ್, ಜ್ಹಾಲಾವರ್ ಮತ್ತು ಚಿತ್ತೋರ್ಗರ್ ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಯಾಗಿದ್ದು, ಚಂಬಲ್ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದಾಗಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.
ಪೂರ್ವ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಲಿದ್ದು, ಪಶ್ಚಿಮ ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.