Rakhshasa Digital Rights: ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾರವೆತ್ತಿರುವುದು ಗೊತ್ತೇ ಇದೆ. ಅಂದರೆ ಈ ಚಿತ್ರದಲ್ಲಿ ಅವರು ಡಿಫರೆಂಟ್ ಗೆಟಪ್ ಧರಿಸಿದ್ದಾರೆ. ಶಿವರಾತ್ರಿ ಹಬ್ಬಕ್ಕೆ ತೆರೆಗೆ ಬರುತ್ತಿರುವ ರಾಕ್ಷಸ ಸಿನಿಮಾದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ತೆಲುಗಿನಲ್ಲಿಯೂ ಬಿಡುಗಡೆಯಾಗುತ್ತಿರುವ ಈ ಚಿತ್ರದ ಥಿಯೇಟರ್ ಹಕ್ಕನ್ನು ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ತನ್ನದಾಗಿಸಿಕೊಂಡಿದೆ. ಅಖಂಡ ತೆಲುಗು ಪ್ರೇಕ್ಷಕರಿಗೆ ರಾಕ್ಷಸ ಸಿನಿಮಾವನ್ನು ಈ ಸಂಸ್ಥೆ ತಲುಪಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.