ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರನ್ನಾಗಿ ಎಐಸಿಸಿ ಕಾರ್ಯದರ್ಶಿಗಳಾದ ಮೋಹನ್ ಪ್ರಕಾಶ್ ಅವರನ್ನು ಆಯ್ಕೆ ಮಾಡಿದೆ. ಅಲ್ಲದೆ, ನೀರಜ್ ದಂಗಿ, ಮೊಹಮ್ಮದ್ ಜಾವೇದ್, ಸಪ್ತಗಿರಿ ಉಲಕಾ ಅವರನ್ನು ಕಮಿಟಿಯ ಸದಸ್ಯರನ್ನಾಗಿ ನೇಮಿಸಿದೆ.
ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕೆಳಗಿಸಲು ಬಿಜೆಪಿಯ ಯಡಿಯೂರಪ್ಪ ಅವರ ಜೊತೆ ನೇರ ಡೀಲ್ ಕುದುರಿಸಿದ್ದವರ ಬಗ್ಗೆ ಗೊತ್ತಿಲ್ಲವೆ? ಎಂದು ಸುರ್ಜೇವಾಲಾಗೆ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಅವರು ಪ್ರಮುಖ ಕಿಂಗ್ ಪಿನ್ ಆಗಿದ್ದು, ಈ ವಿಚಾರವಾಗಿ ಜನರು ಹಾಗೂ ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಿಲ್ಲ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದರು.
ಪ್ರತಿ ಗಂಟೆಗೂ ಹೆಚ್ಚೆಚ್ಚು ದಾಖಲೆಗಳು ಸಿಗುತ್ತಿವೆ. ಇಡೀ ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವನಹಳ್ಳಿ ಬಳಿಯ ಕ್ಲಾಕ್ ಎಕ್ಸೋಟಿಕಾ ರೆಸಾರ್ಟ್ನಲ್ಲಿ ಆಯೋಜನೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿ ಎಐಸಿಸಿ ಪ್ರ.ಕಾರ್ಯದರ್ಶಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಡಿಕೆಶಿ, ಪರಮೇಶ್ವರ್, ಪಕ್ಷದ ಶಾಸಕರು, ಸಂಸದರು ಭಾಗಿ
ಕಾಂಗ್ರೆಸ್ ನಾಯಕರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ ನಡೆಸಿದಾಗ, ಮಾರ್ಗಮಧ್ಯೆಯೇ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಬ್ಯಾರಿಕೇಡ್ ಹತ್ತಿ ಕೆಳಗೆ ಎಗರಿದ ಡಿಕೆಶಿ ಹಾಗೂ ಸುರ್ಜೆವಾಲರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂಬ ಮಾತು ಈಗ ನಡೆಯುತ್ತಿರುವ ಭ್ರಷ್ಟಾಚಾರದ ಮೂಲಕ ಸಾಬೀತಾಗಿದೆ. ಕೊರೊನಾ ಸಂದರ್ಭದಲ್ಲೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಡೆಸುತ್ತಿದೆ-ಸಿದ್ದರಾಮಯ್ಯ ವಾಗ್ದಾಳಿ
ಚಂದ್ರಯಾನ್ -2 ಮೂನ್ ಮಿಷನ್ ಬಗ್ಗೆ ಉತ್ತಮ ಕಾರ್ಯಕ್ಕಾಗಿ ಇಸ್ರೋ ತಂಡಕ್ಕೆ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ ಎಂದು ರಾಹುಲ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.