Amit Shah Fake Video Case: ಬಿಜೆಪಿ ಮತ್ತು ಗೃಹ ಸಚಿವಾಲಯದ ದೂರುಗಳ ನಂತರ ಎಡಿಟ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
Mangalore to New Delhi : ಮಂಗಳೂರಿನಿಂದ ನವದೆಹಲಿಗೂ ವಿಶೇಷ ರೈಲು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಹೋಳಿ ಹಬ್ಬದ ಆಚರಣೆ ಹಿನ್ನೆಲೆ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಈ ರೈಲು ಹೊರಡುವ ಸಮಯ, ದಿನಾಂಕ ಹಾಗೂ ಟಿಕೆಟ್ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
Maharashtra : ಮರಾಠರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಡಾ.ಸದಾಶಿವ ವರದಿ ಜಾರಿ ಮಾಡುವುದು 2-3 ದಶಕಗಳ ಕಾಲದ್ದು ಈಗಿನದು ಅಲ್ಲಾ. ಭಾರತೀಯ ಜನತಾ ಪಕ್ಷದವರು ಡಾ. ಸದಾಶಿವ ಆಯೋಗ ವರದಿ ತಿರಸ್ಕಾರ ಮಾಡಿದ್ದಾರೆ ಅವರು ಮೀಸಲಾತಿ ವಿಚಾರದಲ್ಲಿ ಕಾಟಾಚಾರಕ್ಕೆ ಮೀಸಲಾತಿ ಜಾರಿ ಮಾಡಿದ್ದಾರೆ ನಾವು ಚುನಾವಣಾ ಸಂದರ್ಭದಲ್ಲಿ ಮಾತು ಕೊಟ್ಟಿದ್ದೇವೆ.
'ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ’ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು ಈ ಮೂಲಕ ಒಳಮೀಸಲಾತಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂಬ ಬಿಜೆಪಿಯ ಹಿಪಾಕ್ರಟಿಕ್ ನಡವಳಿಕೆ ಬಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
Muslims OBC Reservation: ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಆ ಪಾಲನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೊಟ್ಟಿರುವುದು ಪರಸ್ಪರ ವೈರತ್ವ-ದ್ವೇಷ ಬೆಳೆಸುವ ದುರುದ್ದೇಶದಿಂದ ಹೊರತು ಇದಕ್ಕೆ ಯಾವ ಸದುದ್ದೇಶವೂ ಇಲ್ಲವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ ಎಂದು ಕಾಂಗ್ರೆಸ್ ಕುಟುಕಿದೆ.
Karnataka Assembly Elections 2023: ರಾಜ್ಯದಲ್ಲಿ ಒಳಮೀಸಲಾತಿ ಬೆಂಕಿ ಧಗಧಗಿಸುತ್ತಿದೆ. ಬಾಗಲಕೋಟೆಯಲ್ಲಿ ಲಂಬಾಣಿ ಸಮುದಾಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದೆ. ತಾಂಡಾದಲ್ಲಿ ಕಟ್ಟಿದ್ದ ಬಿಜೆಪಿ ಬಾವುಟ ಕಿತ್ತು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
Protest by Banjara community: ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿಂದಂತೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.