RBI Monetary Policy: RBI ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ನೇತೃತ್ವದ ಹಣಕಾಸು ನೀತಿ ಸಮಿತಿ (MPC) ತನ್ನ ನೀತಿಗತ ದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಎಂಟನೇ ಬಾರಿಗೆ, ಸಮಿತಿ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೊ ದರವನ್ನು (Repo Rate) ಶೇ. 4 ಮತ್ತು ರಿವರ್ಸ್ ರೆಪೊ ದರವನ್ನು (Reverse Repo Rate) ಶೇ. 3.35% ಕ್ಕೆ ಕಾಯ್ದಿರಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದು ಎಂಪಿಸಿ ಸಭೆಯ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾಹಿತಿ ನೀಡಿದ್ದಾರೆ.
ಈ ಬಾರಿ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಗ್ರಾಹಕರಿಗೆ EMI ಪಾವತಿಸುವುದರಿಂದ ರಿಯಾಯಿತಿ ನೀಡಲು ನಿರಾಕರಿಸಿದ್ದಾರೆ. ಇದಕ್ಕೂ ಮೊದಲು ಕೊರೊನಾ ವೈರಸ್ ಮಹಾಮಾರಿಯನ್ನು ಗಮನದಲ್ಲಿಟ್ಟುಕೊಂಡು RBI, EMI ಪಾವತಿಯಲ್ಲಿ ರಿಯಾಯಿತಿ ನೀಡುವುದಾಗಿ ಘೋಷಿಸಿತ್ತು.
ದೇಶಾದ್ಯಂತ ಲಾಕ್ ಡೌನ್ ಮುಂದುವರೆದಂತೆ ನೀರಿಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಇಳಿಕೆ ಮಾಡಿದೆ. RBI ನ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ರೆಪೋ ದರ ಇಳಿಕೆ ಮಾಡಲಾಗಿದೆ. ಕೊರೊನಾ ವೈರಸ್ ನಿಂದ ಸೊರಗುತ್ತಿರುವ ಆರ್ಥಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಶೇ.೦.75 ರಷ್ಟು ಕಡಿತ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.