ಕರುನಾಡ ಕುರುಕ್ಷೇತ್ರದಲ್ಲಿ ಚುನಾವಣಾ ಚಾಣಕ್ಯನ ಪವರ್ ಶೋ. ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ. BJP ಅಭ್ಯರ್ಥಿ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್ ಶಾ ಪ್ರಚಾರ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ. ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ ಚುನಾವಣಾ ಚಾಣಕ್ಯ. ಕಾಂಗ್ರೆಸ್ ನಾಯಕರ ವಿರುದ್ಧ ಅಮಿತ್ ಶಾ ವಾಗ್ದಾಳಿ.
ಕೊಪ್ಪಳ ಗಂಗಾವತಿಯಲ್ಲಿ ಚುನಾವಣೆ ರಾಜಕೀಯ ರಂಗೇರಿದೆ.. ಜೆಡಿಎಸ್ ಅಭ್ಯರ್ಥಿ ಚನ್ನಕೇಶವರಿಂದ ವಿಭಿನ್ನ ರೀತಿಯಲ್ಲಿ ಮೆರವಣಿಗೆಯಲ್ಲಿ ಸಾಗಿದ್ರು.. ಎತ್ತಿನ ಬಂಡಿಯಲ್ಲಿ ತೆನೆ ಹೊತ್ತ ಮಹಿಳೆಯನ್ನು ನಿಲ್ಲಿಸಿ ರೋಡ್ ಶೋ ನಡೆಸಿದ್ರು.. ಬಳಿಕ ನಾಮಪತ್ರ ಸಲ್ಲಿಸಿದ್ರು.
ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದಿರಿ. ಈ ಬಾರಿ ನಿಮ್ಮ ಸರ್ಕಾರ 40% ಕಮಿಷನ್ ಕೇಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ನಿಮಗೆ ಪತ್ರ ಬರೆದರೂ ಯಾಕೆ ಉತ್ತರಿಸುತ್ತಿಲ್ಲ ಮೋದಿಜಿ. ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸಿಎಂ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪಂಚರತ್ನ ಯಾತ್ರೆ. ರಾಣೆಬೆನ್ನೂರು ತಾ. ಹಲಗೇರಿಯಿಂದ ಮೆಡ್ಲೇರಿವರೆಗೂ ಯಾತ್ರೆ. ಚುನಾವಣೆ ಬಂದಾಗ ಐಟಿ ರೇಡ್ ನಡೆಸುವುದು ಬಿಜೆಪಿ ಪ್ಲ್ಯಾನ್. ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ರೇಡ್ ಆಗ್ತಾವೆ ಎಂದ ಕುಮಾರಸ್ವಾಮಿ.
ಹಾವೇರಿಯಲ್ಲಿಂದು ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ.. ರಾಣೇಬೆನ್ನೂರು ತಾಲೂಕಿನ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಥಯಾತ್ರೆ ನಡೆಯಲಿದೆ.
ಸಿಎಂ ತವರು ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಲಿದೆ. ಹಾವೇರಿ ಮುನ್ಸಿಪಲ್ ಹೈಸ್ಕೂಲ್ ಆವರವಣದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ.. ಯಾತ್ರೆಯಲ್ಲಿ 40 ಸಾವಿರಕ್ಕೂ ಅಧಿಕ ಜನ ಭಾಗಿ ಸಾಧ್ಯತೆ ಇದೆ. ನಗರದ ಪ್ರಮುಖ ಬೀದಿಯಲ್ಲಿ 'ಕೈ' ನಾಯಕರು ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಯೋಜಿಸಿದ್ದ ರೋಡ್ ಶೋನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿಸಿದೆ. ಇದರ ಪರಿಣಾಮ 8 ಮಂದಿ ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿವೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Assembly Elections 2022: ಕರೋನಾ ಸೋಂಕಿನ (Covid-19) ನಡುವೆ ನಡೆಯುತಿರುವ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ರ್ಯಾಲಿ (Election Rally)-ದೊಡ್ಡ ಸಾರ್ವಜನಿಕ ಸಭೆ ಮತ್ತು ರೋಡ್ಶೋಗೆ(Road Show) ರಾಜಕೀಯ ಪಕ್ಷಗಳಿಗೆ ಅವಕಾಶ ನೀಡಬೇಕೇ ಎಂಬ ಕುರಿತು ಚುನಾವಣಾ ಆಯೋಗದ (Election Commission) ಸಭೆ ಇಂದು ನಡೆಯುತ್ತಿದೆ.
ಉತ್ತರಕರ್ನಾಟಕ ಹಾಗೂ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಮುಂಬಯಿಯಲ್ಲಿ ರೋಡ್ ಶೋ ನಡೆಸಲಾಗುತ್ತಿದ್ದು ಇದರಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಲಿದ್ದಾರೆ.
ಗುಜರಾತ್ ನಲ್ಲಿ ನಡೆಯಲಿರುವ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗೆ ಪತ್ನಿ ಅಕೀ ಅಬೆರೊಂದಿಗೆ ಅಹ್ಮದಾಬಾದ್ ಗೆ ಆಗಮಿಸಿದ ಜಪಾನ್ ಪ್ರಧಾನಿ ಶಿಂಜೋ ಅಬೆಯನ್ನು ಪ್ರಧಾನಿ ಮೋದಿ ಪ್ರೀತಿಯ ಅಪ್ಪುಗೆಯ ಮೂಲಕ ಬರಮಾಡಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.