ಮಧ್ಯಾಹ್ನದ ಬಳಿಕ ಈ ಎಲ್ಲಾ ಆರೋಪಗಳನ್ನು ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಸಿಎಚ್ 33 ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತದೆ. ಆ ಸಂದರ್ಭದಲ್ಲಿ ಇವರಿಗೆ ನ್ಯಾಯಾಧೀಶರು ಬೇಲ್ ನೀಡುತ್ತಾರೋ ಅಥವಾ ಜೈಲಿಗೆ ಕಳುಹಿಸುತ್ತಾರೋ ಎಂಬುದು ಇಂದು ಕಾದುನೋಡಬೇಕು.
ಸ್ವಯಂಘೋಷಿತ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಗೆ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಗೆ ಆಗಮಿಸುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಟಿ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ.
ಈಗಾಗಲೇ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗುಲ್ರಾನಿ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದು ಇಬ್ಬರೂ ಯಾವ ವಿಷಯದ ಬಗ್ಗೆಯೂ ಬಾಯಿಬಿಟ್ಟಿಲ್ಲ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.