ಬ್ರಿಟನ್ ಮತ್ತು ಭಾರತದ ನಂಟು ತುಂಬ ಹಳೆಯದು. ಹೂಡಿಕೆಗೆ ಎರಡೂ ಸರ್ಕಾರಗಳು ಕೈ ಜೋಡಿಸಿದರೆ ಬಹಳಷ್ಟು ಪ್ರಯೋಜನವಾಗಲಿವೆ. ಈ ನಿಟ್ಟಿನಲ್ಲಿ ಹೂಡಿಕೆದಾರರು ಕರ್ನಾಟಕದಲ್ಲಿ ಹೂಡಿಕೆಗೆ ಆದ್ಯತೆ ನೀಡಬೇಕು ಎಂದು ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು.
ಕೆಲ ಪ್ರದೇಶಗಳಲ್ಲಿ ಒಂದೇ ತೆರನಾದ ಬೆಳೆ ಬೆಳೆಯುವಂತೆ ಹಾಗೂ ವಿಮೆ ಮಾಡಿಸುವಂತೆ ಕೆಲ ವ್ಯಕ್ತಿಗಳು ವಿಮಾ ಕಂಪನಿಗಳ ಜೊತೆಗೂಡಿ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ರೈತರು ಸಚಿವರ ಗಮನಕ್ಕೆ ತಂದರು. ಇಂಥವರ ಬಗ್ಗೆ ತೀವ್ರ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಈ ವಿಷಯದಲ್ಲಿ ಸಂತ್ರಸ್ಥೆ ತಾಯಿ ದೂರು ದಾಖಲು ಮಾಡಿದ್ದಾಳೆ. ಸ್ವಲ್ಪ ಕಾದು ನೋಡೋಣ ನಾವು ಏನೂ ಮಾತನಾಡಲು ಆಗಲ್ಲ. ಧಾರವಾಡದಲ್ಲಿ ಸಂತೋಷ್ ಲಾಡ್ ಹೇಳಿಕೆ. ಯಾವುದೇ ಸರ್ಕಾರ ಇದ್ರು ದೂರು ಕೊಟ್ಟರೆ ದಾಖಲು.
ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವದೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಡಿ.23 ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದ್ದು, ಸರಕಾರ ಹಂತದಲ್ಲಿ ಪರಿಹರಿಸಬೇಕಾದ ಮತ್ತು ಕೊರ್ಟ, ಪಾಲಸಿ ಸಂಬಂದಿ ಅಹವಾಲು ಹೊರತುಪಡಿಸಿ ಬಹುತೇಕ ಅಹವಾಲುಗಳನ್ನು ಸ್ಥಳಿಯವಾಗಿ ಪರಿಹರಿಸಲಾಗಿದೆ. ಬರುವ ಜನವರಿಯಿಂದ ಸಾರ್ವಜನಿಕರ ಅನಕೂಲಕ್ಕಾಗಿ ತಾಲೂಕು ಹಂತದಲ್ಲಿ ಜನತಾ ದರ್ಶನ ಆಯೋಜಿಸಲಾಗುವುದು ಎಂದು ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.
ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು. ವಿಧಾನಮಂಡಲ ಅಧಿವೇಶನವು ವಿದ್ಯಾರ್ಥಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಎಲ್ಲರಿಗೂ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಜ್ಞಾನ ನೀಡುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.
ಕಲಘಟಗಿ, ಅಳ್ನಾವರ, ಧಾರವಾಡ ತಾಲೂಕಿನ ಕಬ್ಬು ಬೆಳೆಗಾರರಿಗೆ ಹಳಿಯಾಳದ ಪ್ಯಾರಿ ಶುಗರ್ಸ್ ಕಾರ್ಖಾನೆಗೆ ಕಬ್ಬು ಕಟಾವು ಹಾಗೂ ಸಾಗಾಟ ದರವನ್ನು ಹೆಚ್ಚಿಗೆ ನಿಗದಿ ಮಾಡಿದ್ದು ಅದನ್ನು ಪರಿಶೀಲಿಸಿ ಕಡಿಮೆಗೊಳಿಸುವಂತೆ ಹಳಿಯಾಳದ ಪ್ಯಾರಿ ಶುಗರ್ಸ್ ಕಾರ್ಖಾನೆ ಅಧಿಕಾರಿಗಳಿಗೆ ಸಚಿವರಾದ ಸಂತೋಷ ಲಾಡ್ ಸೂಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.