ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಏಪ್ರಿಲ್ 28 ರಂದು ರಿಲಯನ್ಸ್ ಜನರಲ್ ಇನ್ಶುರೆನ್ಸ್ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಕರೆಸಿದೆ.ಕೇಂದ್ರ ದೆಹಲಿಯಲ್ಲಿರುವ ಏಜೆನ್ಸಿಯ ಅಕ್ಬರ್ ರೋಡ್ ಗೆಸ್ಟ್ಹೌಸ್ನಲ್ಲಿ ಕೆಲವು ಸ್ಪಷ್ಟೀಕರಣಗಳಿಗಾಗಿ ಸಿಬಿಐ ತನ್ನ ಉಪಸ್ಥಿತಿಯನ್ನು ಕೇಳಿದೆ ಎಂದು ಮಲಿಕ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಸೋಮವಾರ ಭಾರತದ ವಿರುದ್ಧ ಯಾವುದೇ ದುಸ್ಸಾಹಸ ಮಾಡುವ ಬಗ್ಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು, ಪಾಕಿಸ್ತಾನ ಉಗ್ರ ಚಟುವಟಿಕೆ ತಡೆಯದಿದ್ದಲ್ಲಿ ಭಾರತೀಯ ಸೇನೆಯು ಒಳಕ್ಕೆ ಹೋಗಿ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸುತ್ತದೆ ಎಂದು ಹೇಳಿದ್ದಾರೆ.
50 ದಿನಗಳಿಗೂ ಹೆಚ್ಚು ಕಾಲ ಗೃಹಬಂಧನದಲ್ಲಿದ್ದ ಕಾಶ್ಮೀರದ ರಾಜಕೀಯ ಮುಖಂಡರನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಸಲಹೆಗಾರರೊಬ್ಬರು ಹೇಳಿದ್ದಾರೆ.
ಭಯೋತ್ಪಾದಕರ ಕೃತ್ಯದ ಬಗ್ಗೆ ಕಠಿಣ ನಿಲುವು ತಾಳಿರುವ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಆಗಸ್ಟ್ ತಿಂಗಳಿಂದ 40 ಕ್ಕೂ ಅಧಿಕ ಜನರು ಸಾವನನಪ್ಪಿದ್ದಾರೆ ಒಂದು ವೇಳೆ ಉಗ್ರರು ಗುಂಡು ಹಾರಿಸಿದ್ದಲ್ಲಿ ಅವರಿಗೆ ವಾಪಸ್ ಗುಂಡೇ ಬರುವುದೇ ಹೊರತು ಹೂಗುಚ್ಚವಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.