ಎಸ್ಟಿ ಸಮುದಾಯಕ್ಕೆ ಶೇ 7 ರಷ್ಟು ಮೀಸಲಾತಿಯನ್ನು ಮೋದಿ ಸರ್ಕಾರ ಮಾಡಿದ ಮೆಲೆ ರಾಜ್ಯದಲ್ಲಿ ಶೇ 7% ಮೀಸಲಾತಿ ಬೇಕು ಎಂದು ಆಗ್ರಹ ಶುರುವಾಯಿತು. ಹಿಂದುಳಿದ ವರ್ಗದ ಆಯೊಗಕ್ಕೆ ಸಂವಿಧಾನ ಬದ್ದ ಅಧಿಕಾರ ಕೊಟ್ಟಿದ್ದು ನರೇಂದ್ರಮೋದಿ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
SC ST Reservation: ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡರು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಷ್ ಪ್ರಸ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.
ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ.. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಮೀಸಲಾತಿ ನೀಡಬೇಕು ಅಂತ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ಈ ವಿಶ್ವವಿದ್ಯಾಲಯದಲ್ಲಿ ಮಾತ್ರ ಸರ್ಕಾರದ ಆದೇಶ ಪತ್ರವೇ ಸಿಕ್ಕಿಲ್ಲವಂತೆ.
ರಾಜ್ಯದಲ್ಲಿ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ. ನಾವು ತಂದಿದ್ದು, ನಾವು ಮಾಡಿದ್ದು, ನಮ್ಮ ಪ್ರಯತ್ನ ಎಂದು ಮೂರು ಪಕ್ಷಗಳಲ್ಲೂ ಕ್ರೆಡಿಟ್ಗಾಗಿ ಜಿದ್ದಾಜಿದ್ದಿ ಶುರುವಾಗಿದೆ. ಇದ್ರ ನಡುವೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ನಡೆದಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ.ಐವತ್ತನ್ನು ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ? ಇದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು, ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮೀಸಲಾತಿ ಏರಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರ ಆದಷ್ಟು ಬೇಗ ನಿರ್ಣಯ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.
ಬಹಳ ವರ್ಷಗಳ ನ್ಯಾಯಸಮ್ಮತವಾದ ಬೇಡಿಕೆ, ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆಯಂತೆ ಪರಿಶಿಷ್ಟ ಜಾತಿಗೆ ಶೇ 15 ರಷ್ಟಿದ್ದ ಮೀಸಲಾತಿಯನ್ನು ಶೇ. 17% ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 3 ರಿಂದ ಶೇ.7% ಕ್ಕೆ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಕೂತಿದ್ದಾರೆ.ಸರ್ಕಾರ ಅವರ ಬೇಡಿಕೆಗಳ ಈಡೇರಿಕೆಗೆ ಮುಕ್ತವಾಗಿದೆ ಎಂದು ಹೇಳಿದರೆ ಸಾಲದು ಅಲ್ಲಿಗೆ ಹೋಗಿ ಧರಣಿ ಕೈಬಿಡುವಂತೆ ಸ್ವಾಮಿಗಳ ಮನವೊಲಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.