ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿ. ಜಯಲಲಿತಾ ಅವರ ಪರಮಾಪ್ತೆ ವಿ.ಕೆ. ಶಶಿಕಲಾ ಅವರಿಗೆ ಸೇರಿದ 1600 ಕೋಟಿ ರೂ. ಬೇನಾಮಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಜೈಲಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ವಿ.ಕೆ. ಶಶಿಕಲಾ ನಟರಾಜನ್ ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಈ ಹಿಂದೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಲಾಗಿತ್ತು.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ವಿ.ಕೆ. ಶಶಿಕಲಾ ಪತಿಯ ನಿಧನದ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಚೆನ್ನೈಗೆ ತೆರಳಲಿದ್ದಾರೆ.
ಉಚ್ಚಾಟಿತ ಎಐಎಡಿಎಂಕೆ ಮುಖ್ಯಸ್ಥೆ ವಿ.ಕೆ. ಶಶಿಕಲಾ ಪತಿ ನಟರಾಜನ್ ಮಾರುತಪ್ಪ ಕೆಲ ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಎಂದು ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.