ಮುಜರಾಯಿ ಇಲಾಖೆ ಮತ್ತು ಮಹಿಳಾ ಕಲ್ಯಾಣಕ್ಕೆ ದಾಖಲೆಯ ಅನುದಾನ ನೀಡುವ ಮೂಲಕ ಹಣಕಾಸು ಇಲಾಖೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಐತಿಹಾಸಿಕ ಮತ್ತು ಕ್ರಾಂತಿಕಾರಕವಾಗಿದೆ ಎಂದು ಮುಜರಾಯಿ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಬಣ್ಣಿಸಿದ್ದಾರೆ.
ಯಾರೇ ಬರಲಿ ನಾವು ಚುನಾವಣೆಗೆ ಗಟ್ಟಿಯಾಗಿ ಇದ್ದೇವೆ. ಕುಸ್ತಿ ಮೈದಾನದಲ್ಲಿ ಇಳಿದ ಮೇಲೆ ಏನಾದ್ರೂ ಆಗಲಿ ಎಂದು ಸಚಿವೆ ಜೊಲ್ಲೆ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಿದ ಜೊಲ್ಲೆ, ಚುನಾವಣೆಗೆ ವಿರೋಧ ಪಕ್ಷದವರು ಅದನ್ನೇ ಹೇಳುತ್ತಾರೆ ಎಂದಿದ್ದಾರೆ.
Salaam Aarti: ಇನ್ನುಮುಂದೆ ‘ದೀವಟಿಗೆ ಸಲಾಂ’ ಪದದ ಬದಲಾಗಿ ‘ದೀವಟಿಗೆ ನಮಸ್ಕಾರ’, ‘ಸಲಾಂ ಆರತಿ’ ಪದದ ಬದಲಾಗಿ ‘ಆರತಿ ನಮಸ್ಕಾರ’ ಎಂದು ಹಾಗೂ ‘ಸಲಾಂ ಮಂಗಳಾರತಿ” ಪದದ ಬದಲಾಗಿ ‘ಮಂಗಳಾರತಿ ನಮಸ್ಕಾರ’ ಎಂದು ಹೆಸರು ಬದಲಾಯಿಸಿ ಸೇವಾಕಾರ್ಯ ಮುಂದುವರೆಸಲು ಸುತ್ತೋಲೆ ಹೊರಡಿಸಲಾಗಿದೆ.
ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 5 ರಂದು 2 ಲಕ್ಷದಷ್ಟು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಿನ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಕಲ್ಪಿಸುವತ್ತ ಕ್ರಮ ವಹಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಸೂಚನೆ ನೀಡಿದರು.
ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು ಎಂಬುದು ಹಲವರ ಕನಸು. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ, ಬೆಂಗಳೂರಿನಿಂದ ಕಾಶಿಗೆ ತೆರಳಲು ಹೊಸ ರೈಲು ಸೇವೆ ಆರಂಭವಾಗಲಿದೆ. ಅದೇ 'ಭಾರತ್ ಗೌರವ್' ತೀರ್ಥಯಾತ್ರೆ ರೈಲು. ಈ ರೈಲಿನಲ್ಲಿ ಉತ್ತರ ಭಾರತದ ಪ್ರಮುಖ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಬಹುದು.
Celebrate Ugadi As Religious Day - ಹಿಂದುಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯ ದಿನವನ್ನು ಧಾರ್ಮಿಕ ದಿನವನ್ನಾಗಿ (Religious Day) ವಿಶೇಷವಾಗಿ ಆಚರಿಸುವಂತೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ (Shashikala Jolle) ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಸ್ತುವಾರಿಯಾಗಿ ಪ್ರಪ್ರಥಮ ಬಾರಿಗೆ ಆಗಮಿಸಿದ ಸಂಧರ್ಭದಲ್ಲಿ ನನಗೆ ದೊರೆತಂತಹ ಆತ್ಮೀಯ ಸ್ವಾಗತಕ್ಕೆ ಬಹಳ ಆಭಾರಿಯಾಗಿದ್ದೇನೆ. ಇಂದು ನನಗೆ ಗಂಡನ ಮನೆಯಿಂದ ತವರು ಮನೆಗೆ ಬಂದಂತಹ ಆತ್ಮಿಯ ಸ್ವಾಗತ ದೊರೆಯಿತು ಎಂದು ಸಚಿವರು ಸಂತಸ ವ್ಯಕ್ತ ಪಡಿಸಿದರು.
ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.