ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು.
Anjanadri-Ayodhya Train: ಅಖಂಡ ಗಂಗಾವತಿ ತಾಲೂಕು ಭತ್ತದ ಕಣಜವಾಗಿದೆ. ಈ ಭಾಗಕ್ಕೆ ರೈಸ್ ಟೆಕ್ನಾಲಜಿ ಪಾರ್ಕ್ ಅಗತ್ಯವಾಗಿದೆ. ಭತ್ತದಿಂದ ನಾವು ಬೇರೆ ಬೇರೆ ಉತ್ಪನ್ನ ಮಾಡಲು ಇಲ್ಲಿ ಅವಕಾಶವಿದೆ ಎಂದು ಭಾವಿಸಿ ರೈಸ್ ಟೆಕ್ನಾಲಜಿ ಪಾರ್ಕ್ ಆರಂಭದ ಸಾಹಸಕ್ಕೆ ಕೈ ಹಾಕಿದ್ದೇವೆ. ರೈಸ್ ಟೆಕ್ನಾಲಜಿ ಪಾರ್ಕ್ಗೆ ಯೋಜಿಸಿದ್ದೇವೆ. ಇದಕ್ಕಾಗಿ 357 ಎಕರೆ ಭೂಮಿ ಮತ್ತು 157 ಕೋಟಿ ರೂ ಕೊಟ್ಟಿದ್ದೇವೆ. ಇದು ಇನ್ನು ಅಭಿವೃದ್ಧಿ ಆಗಬೇಕಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರ ಬೇಕು ಎಂದು ಸಚಿವರು ತಿಳಿಸಿದರು.
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಅದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಶಿವರಾಜ್. ಎಸ್. ತಂಗಡಗಿ ಅವರು ಹೇಳಿದ್ದಾರೆ.
ನಾಡ ಪ್ರಸಿದ್ಧ ಹನುಮಮಾಲಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ರಚಿಸಿರುವ ಹತ್ತಾರು ಸಮಿತಿಗಳ ಅಧ್ಯಕ್ಷರು ಹಾಗೂ ಸಮತಿಯ ಸದಸ್ಯರಾದ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಡಿಸೆಂಬರ್ 17ರಂದು ಸಭೆ ನಡೆಸಿ ಇದುವರೆಗಿನ ಸಿದ್ಧತೆಯನ್ನು ಪರಿಶೀಲಿಸಿದರು.
ಹೊರ ರಾಜ್ಯದವರ ಕನ್ನಡ ಭಾಷಾ ಕಲಿಕೆಗಾಗಿ ಕನ್ನಡ ಕಲಿಕಾ ಕೇಂದ್ರ ಸ್ಥಾಪನೆ ಮಾಡುವ ಸಂಬಂಧ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಕನಸು ಕಾಣುತ್ತಿದ್ದು, ನಮ್ಮ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.