ಸಿಕ್ಕಿಬಿದ್ದ ವಲಸೆ ಕಾರ್ಮಿಕರನ್ನು ತಮ್ಮ ಸ್ಥಳೀಯ ಸ್ಥಳಗಳಿಗೆ ಕರೆದೊಯ್ಯಲು ಒತ್ತಾಯಿಸಿದಂತೆ ವಿವಿಧ ರಾಜ್ಯಗಳಿಗೆ ‘ಶ್ರಮಿಕ್ ವಿಶೇಷ ರೈಲುಗಳು ನೀಡುವುದನ್ನು ಮುಂದುವರಿಸುವುದಾಗಿ ಭಾರತೀಯ ರೈಲ್ವೆ (Indian Railways) ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇತರ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ಮತ್ತು ಪ್ರವಾಸಿಗರನ್ನು ತಮ್ಮ ಸ್ಥಳಗಳಿಗೆ ಕಳುಹಿಸಲು ರೈಲ್ವೆ ಮೇ 1 ರಿಂದ ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಲು ಪ್ರಾರಂಭಿಸಿತು.
ದೇಶವು ಕರೋನವೈರಸ್ ನಿಂದ ತತ್ತರಿಸಿರುವ ಹಿನ್ನಲೆಯಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಈಗ ಲಾಕ್ ಡೌನ್ ನಲ್ಲಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಮುಂದಿನ 10 ದಿನಗಳಲ್ಲಿ ಇನ್ನೂ 2,600 ಶ್ರಮಿಕ್ ವಿಶೇಷ ರೈಲುಗಳಿಗೆ ಚಾಲನೆ ನೀಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.