ಸ್ವಾಮಿ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಅವರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಟ್ವೀಟ್ ಮಾಡುತ್ತಿರೋ?? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.
CM Siddaramaiah:ಕಾಂಗ್ರೆಸ್ ಪರ ಜನಬೆಂಬಲ ನಿರೀಕ್ಷೆಗೂ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019 ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದು ತಿಳಿಸಿದರು.
ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರು ಒಂದಷ್ಟು ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
Lok Sabha Election 2024: ಓಬಿಸಿ ಮೀಸಲು ಹಕ್ಕನ್ನು ಮುಸಲ್ಮಾನರಿಗೆ ಹಂಚುತ್ತಿರುವ ನಿಮ್ಮ ನಿರ್ಧಾರದ ಬಗ್ಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪಿಸಿರುವುದು ಸಮಂಜಸವಾಗಿದೆ. ಮುಸ್ಲಿಂರಿಗೆ ಧರ್ಮಾಧಾರಿತವಾಗಿ ನೀಡುತ್ತಿದ್ದ ಮೀಸಲು ಸೌಲಭ್ಯವನ್ನು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದಾಗ ಹಿಂಬಾಗಿಲ ಮೂಲಕ ಆ ನಿರ್ಧಾರಕ್ಕೆ ಅಡ್ಡಿ ತಂದವರು ನೀವಲ್ಲವೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ.ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.