ಇತ್ತೀಚೆಗೆ ಸಂಸತ್ತು ಅಂಗೀಕರಿಸಿದ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಎನ್ಸಿಪಿ (ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ) ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ವಿರೋಧ ಪಕ್ಷಗಳ ನಿಯೋಗ ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತು.
ಪ್ರಮುಖ ಬೆಳವಣಿಗೆಯಲ್ಲಿ ದೆಹಲಿ ಪೊಲೀಸರು ಶನಿವಾರದಂದು ಫೆಬ್ರವರಿಯಲ್ಲಿ ನಡೆದ ದೆಹಲಿಯ ಗಲಭೆ ಪ್ರಕರಣದ ವಿಚಾರವಾಗಿ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞೆ ಜಯತಿ ಘೋಷ್, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಪೂರ್ವಾನಂದ್ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ ರಾಹುಲ್ ರಾಯ್ ಅವರ ಹೆಸರನ್ನು ಪೂರಕ ಚಾರ್ಜ್ಶೀಟ್ನಲ್ಲಿ ಪರಿಗಣಿಸಿದ್ದಾರೆ.
ಕೇಂದ್ರದ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿರುವ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ' ಮೋದಿ ಸರ್ಕಾರವು ಆರ್ಥಿಕ ಸುಧಾರಣೆಗೆ ಬದಲು ವಿಭಜನೆ ಮತ್ತು ಧ್ರುವೀಕರಣ ನೀತಿ ಅನುಸರಿಸುವುದರಲ್ಲಿ ತಲ್ಲೀನವಾಗಿದೆ ಎಂದು ಕಿಡಿ ಕಾರಿದ್ದಾರೆ.
ಎಡಪಕ್ಷಗಳ ಹಿರಿಯ ನಾಯಕರಾದ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಲಾಗಿದೆ.ಇಬ್ಬರು ನಾಯಕರನ್ನು ಬಂಧಿಸಿರುವುದಕ್ಕೆ ಎಡಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜೀ ನೇತೃತ್ವದ ಮಹಾಘಟಬಂಧನ್ ರ್ಯಾಲಿ ನಂತರ ಮತ್ತೊಮ್ಮೆ ಪ್ರತಿಪಕ್ಷಗಳು ದೆಹಲಿ ಜಂತರ ಮಂತರ್ ನಲ್ಲಿ ಒಗ್ಗಟ್ಟಿನ ಪ್ರದರ್ಶನ ತೋರಿದರು.ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಯೋಜಿಸಿದ್ದ ಈ ರ್ಯಾಲಿಯಲ್ಲಿ ಸುಮಾರು 20 ಪಕ್ಷಗಳ ನಾಯಕರು ಭಾಗವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.