Rinku Singh: ಐಪಿಎಲ್ 2025 ನ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನವೇ ಯಾವ ಆಟಗಾರ ಯಾವ ತಂಡ ಸೇರಲಿದ್ದಾರೆ ಎನ್ನು ಚರ್ಚೆಗಳು ಶುರುವಾಗಿದ್ದು, ಈ ಭಾರಿಯ ಐಪಿಎಲ್ನಲ್ಲಿ ಭಾರಿ ಬದಲಾವಣೆಗಳನ್ನು ಕಾಣುವುದು ಖಚಿತ ಎಂದೆ ಹೇಳಬಹುದು.
cricket ball prices: ಕ್ರಿಕೆಟ್ ನಲ್ಲಿ ಬಳಸುವ ಚೆಂಡುಗಳ ಬೆಲೆ ಎಷ್ಟು? ಎಂಬ ಪ್ರಶ್ನೆ ಅನೇಕರಲ್ಲಿ ಮೂಡಬಹುದು. ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಪಂದ್ಯಗಳಲ್ಲಿ ಮೂರು ಬಗೆಯ ಚೆಂಡುಗಳನ್ನು ಬಳಸಲಾಗುತ್ತದೆ. ಪ್ರಮುಖ ವ್ಯತ್ಯಾಸವೆಂದರೆ ಚೆಂಡುಗಳನ್ನು ಮೂರು ಕಂಪನಿಗಳು ತಯಾರಿಸುತ್ತವೆ.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
India vs Sri Lanka: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ 32 ರನ್ ಗಳಿಂದ ಸೋತಿದೆ. ಈ ಪಂದ್ಯದಲ್ಲಿ 241 ರನ್ಗಳ ಗುರಿಯನ್ನು ಬೆನ್ನಟ್ಟಿದ ಭಾರತ ರೋಹಿತ್ ಶರ್ಮಾ ಮೈದಾನದಲ್ಲಿ ಸುಲಭವಾಗಿ ಗೆಲ್ಲುವ ಲಕ್ಷಣ ಕಂಡುಬಂದಿತ್ತು, ಆದರೆ ರೋಹಿತ್ ಶರ್ಮಾ ಔಟಾದ ನಂತರ ಭಾರತ ತಂಡದ ಪತನ ಆರಂಭವಾಯಿತು, ಇದೇ ಕಾರಣ ಭಾರತ ತಂಡ ಎದುರಾಳಿ ತಂಡದ ವಿರುದ್ಧ ಮಂಡಿ ಊರುವಂತಾಯತು.
Virat Kohli & Gautam Gambhir: ಭಾರತ ಕ್ರಿಕೆಟ್ ತಂಡದ ಹೊಸ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ನಂತರ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಮೊದಲ ಭಾರಿಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಸಮಯದಲ್ಲಿ ಕೊಹ್ಲಿ ಹಾಗೂ ಗಂಭೀರ್ ನಡುವಿನ ಜಗಳದ ನಂತರ ದೂರಾಗಿದ್ದ ಕೊಹ್ಲಿ ಹಾಗೂ ನೂತನ ಕೋಚ್ ಗೌತಮ್ ಗಂಭೀರ್ ಅವರ ಸಮ್ಮಿಲವನ್ನು ನೋಡಲು ಅನೇಕರು ಕಾತುರದಿಂದ ಕಾಯುತ್ತಿದ್ದರು.
Ravi Shastri on Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಅವರ ಅಧಿಕಾರದಲ್ಲಿ ಟೀಂ ಇಂಡಿಯಾ ಉತ್ತಮ ಫಲಿತಾಂಶಗಳನ್ನು ಸಾಧಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಆದರೆ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದೆ ಇರುವ ದೊಡ್ಡ ಕೆಲಸವೆಂದರೆ ಆಟಗಾರರನ್ನು ಸಮನ್ವಯಗೊಳಿಸುವುದು ಎಂದು ರವಿಶಾಸ್ತ್ರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Sri Lanka Tour: ಭಾರತ ಕ್ರಿಕೆಟ್ ತಂಡ ಈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ, ಇದಕ್ಕೆ ಈಗಾಗಲೇ ವೇಳಾಪಟ್ಟಿ ಕೂಡ ಬಿಡುಗಡೆಯಾಗಿದ್ದು, ಹೊಸ ಕೋಚ್ ಆಗಿ ಗಂಭೀರ್ ಜವಬ್ದಾರಿ ವಹಿಸಿಕೊಳ್ಳಲಿದ್ದಾರೆ. ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾ ಕ್ರಿಕೆಟ್ನಿಂದ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಷನ್ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇದೇ ಕಾರಣದಿಂದ ಭಾರತ ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
Rishabh Pant: ಟೀಮ್ ಇಂಡಿಯಾ 17 ವರ್ಷಗಳ ನಂತರ ಟಿ20 ವಿಶ್ವಕಪ್ 2024 ರಲ್ಲಿ ಚಾಂಪಿಯಸ್ ಪಟ್ಟ ಗೆದ್ದ ಕುಷಿಯಲ್ಲಿದೆ. ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಕಣ್ಣು ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್ ಮೇಲೆ ನೆಟ್ಟಿದೆ. ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನ ಮೊದಲು ಮೆಗಾ ಹರಾಜು ಶೀಘ್ರದಲ್ಲೆ ನಡೆಯಲಿದೆ. ಅದರ ನಂತರ ಅನೇಕ ತಂಡಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಕಾಣಬಹುದಾಗಿದೆ.
IND vs ZIM: ಐದು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಶನಿವಾರ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಶುಭಮನ್ ಗಿಲ್ ಪಡೆ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಎದುರಾಳಿ ತಂಡದ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.