IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರರಾದ ಮತಿಶ ಪತಿರಣ ಮತ್ತು ದಿಲ್ಶಾನ್ ಮಧುಶಂಕಲ ತೋಡದಿಂದ ಹೊರಗುಳಿದಿದ್ದು, ಇದೀಗ ಮತ್ತೊಂದು ಆಟಗಾರ ಹೊರಬದ್ದಿರುವುದು ತಂಡಕ್ಕೆ ಆಕಾಶ ತಲೆ ಮೇಲೆ ಬಿದ್ದಂತಾಗಿದೆ.
Mohammed Shami: ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರು ಗಾಯದಿಂದಾಗಿ ಮೈದಾನದಿಂದ ಹೊರಗುಳಿದಿದ್ದರು. ಇದೀಗ ಶಮಿ ಅವರೇ ಕ್ರಿಕೆಟ್ಗೆ ವಾಪಸಾದ ಕುರಿತು ಅಭಿಮಾನಿಗಳೊಂದಿಗೆ ದೊಡ್ಡ ಅಪ್ಡೇಟ್ ಹಂಚಿಕೊಂಡಿದ್ದಾರೆ.
IND vs SL: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಅಬ್ಬರ ಮುಂದುವರೆದಿದೆ. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಎದುರಾಳಿ ತಂಡದ ಬೆವರಿಳಿಸಿದೆ. ಭಾನುವಾರ ನಡೆದ ಮೂರು ಟಿ20 ಸರಣಿಯ ಎರಡನೇ ಟಿ20 ಪಂದ್ದಯಲ್ಲಿ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದ ಅಡಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
India-Pakistan Match: ಚಾಂಪಿಯನ್ಸ್ ಟ್ರೋಫಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಪಾಕಿಸ್ತಾನ ತಂಡ ಲಾಹೋರ್ನಲ್ಲಿ ಹಣಿ ನಡೆಸಿತ್ತು. ಆದರೆ, ಇದೀಗ ಈ ಪಂದ್ಯ ಲಾಹೋರ್ನಲ್ಲಿ ನಡೆಯುವುದಿಲ್ಲ ಎನ್ನು ಸುದ್ದಿ ಕೇಳಿಬಂದಿದೆ. ಐಸಿಸಿ ಚಾಂಫಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ, ಬದಲಿಗೆ ಪಾಕಿಸ್ತಾನ ತಂಡ ಬಾರತಕ್ಕೆ ಪ್ರಯಾಣ ಬೆಳಸಲಿದೆ ಎಂದು ಮೂಲಗಳು ತಿಳಿಸಿವೆ.
IND vs ZIM: ಐದು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಶನಿವಾರ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಶುಭಮನ್ ಗಿಲ್ ಪಡೆ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಎದುರಾಳಿ ತಂಡದ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ.
Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್ ನಲ್ಲಿ ಟೀಂ ಇಂಡಿಯಾ 10 ವಿಕೆಟ್ಗಳ ಜಯ ಸಾಧಿಸಿದೆ.
ಭಾರತ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಪುತ್ರಿ ಜೀವಾ ಧೋನಿಗೆ ಅರ್ಜೆಂಟೀನಾ ಫುಟ್ ಬಾಲ್ ಟೀಮ್ ಕ್ಯಾಪ್ಟನ್ ಲಿಯೊನೆಲ್ ಮೆಸ್ಸಿ ತಮ್ಮ ಜೆರ್ಸಿಯನ್ನು ಗಿಫ್ಟ್ ಆಗಿ ನೀಡಿದ್ದಾರೆ. ಫಿಫಾ ವಿಶ್ವಕಪ್ 2022 ಪಂದ್ಯದಲ್ಲಿ ತಾವು ಧರಿಸಿದ್ದ ಶರ್ಟ್ನ್ನು ಸಹಿ ಸಮೇತ ಜೀವಾಗೆ ಉಡುಗೂರೆಯಾಗಿ ನೀಡಿದ್ದು, ಈ ಕುರಿತು ಜೀವಾ ತನ್ನ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.
ಜೆರೆಮಿ ಲಾಲ್ರಿನ್ನುಂಗಾ ಸ್ನ್ಯಾಚ್ನಲ್ಲಿ 140 ಕೆಜಿ ಕ್ಲೀನ್ ಆಂಡ್ ಜರ್ಕ್ನಲ್ಲಿ 160 ಕೆಜಿ ಎತ್ತಿದ್ದಾರೆ. ಈ ಮೂಲಕ ಒಟ್ಟು 300 ಕೆ.ಜಿ ಭಾರ ಎತ್ತಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿಯ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಎರಡನೇ ಚಿನ್ನದ ಪದಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.